ಅಡಿಲೇಡ್: ಭಾರತ-ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯದ ವೇಳೆ ಆಸಿಸ್ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತು ಭಾರತದ ಮಹಮದ್ ಸಿರಾಜ್ ನಡುವಿನ ಸಂಘರ್ಷ ಅಂತ್ಯಗೊಂಡಿದೆ ಎನ್ನುವಾಗಲೇ ಟ್ರಾವಿಸ್ ಹೆಡ್ ಹಾಗೂ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಡುವಿನ ವಾಗ್ದಾದ ಐಸಿಸಿ ಅಂಗಳ ತಲುಪಿದೆ. ಇದರಿಂದ ಇಬ್ಬರ ವಿರುದ್ಧವೂ ಐಸಿಸಿ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಭಾರತ ಮತ್ತು ಆಸೀಸ್ ನಡುವಿನ 2ನೇ ಟೆಸ್ಟ್ ಪಂದ್ಯದ ವೇಳೆ ಆಸೀಸ್ನ ಮೊದಲ ಇನ್ನಿಂಗ್ಸ್ನಲ್ಲಿ ಸಿರಾಜ್ ಎಸೆದ ಯಾರ್ಕರ್ಗೆ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್ ಆಗಿದ್ದರು. ಅಷ್ಟರಲ್ಲಾಗಲೇ 140 ರನ್ ಬಾರಿಸಿದ್ದರು. ಟ್ರಾವಿಸ್ ಹೆಡ್ ಔಟಾಗುತ್ತಿದ್ದಂತೆ ʻವೆಲ್ ಬೌಲ್ʼ ಎಂದು ಹೇಳಿರುವುದಾಗಿ ಹೇಳಿಕೊಂಡಿದ್ದಾರೆ. ಈ ವೇಳೆ ಸಿರಾಜ್ ಅವರು ತೋರಿದ ಅತಿರೇಖದ ವರ್ತನೆ ಈಗ ಚರ್ಚೆಗೆ ಗ್ರಾಸವಾಗಿದೆ.
ನಿಮಗೆ ಗೊತ್ತೆ..? ಬಿಳಿ ಕೂದಲು, ಬೊಜ್ಜು ಸೇರಿ ಹಲವು ರೋಗಗಳಿಗೆ ಈ ಎಲೆಯಲ್ಲಿದೆ ಪರಿಹಾರ.!
ಔಟಾದ ಬಳಿಕ ಸಿರಾಜ್ಗೆ ಹೆಡ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು. ಆದರೆ ಅವರಿಬ್ಬರ ನಡುವೆ ವಿನಿಮಯವಾದ ಮಾತುಗಳು ಏನು ಎನ್ನುವುದು ಸ್ಪಷ್ಟವಾಗಿಲ್ಲ. ಆದ್ರೆ ಇದನ್ನು ಅಭಿಮಾನಿಗಳು ಸುಮ್ಮನೆ ಬಿಡಲಿಲ್ಲ. ಸಿರಾಜ್ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ಗೆ ನಿಂತಿದ್ದಾಗ ಆಸ್ಟ್ರೇಲಿಯಾ ಪ್ರೇಕ್ಷಕರು ʻಬೂʼ ಎಂದು ಅವರನ್ನು ಅಣುಕಿಸಿದ್ದರು. ಈ ವಿವಾದ ಐಸಿಸಿ ಅಂಗಳ ತಲುಪಿದ್ದು, ಇಬ್ಬರಿಗೂ ದಂಡ ವಿಧಿಸುವ ಅಥವಾ ಒಂದು ಪಂದ್ಯಕ್ಕೆ ಬ್ಯಾನ್ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಟ್ರಾವಿಸ್ ಹೆಡ್ ಹೇಳಿದ್ದೇನು?
2ನೇ ದಿನದ ಆಟ ಮುಕ್ತಾಯಗೊಂಡ ಬಳಿಕ ಟ್ರಾವಿಸ್ ಹೆಡ್ ಪೋಸ್ಟ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ್ದರು. ನಾನು ಔಟಾದ ಬಳಿಕ ʻಚೆನ್ನಾಗಿ ಬೌಲ್ ಮಾಡಿದ್ದಿರಿʼ ಎಂದು ಹೇಳಿದೆ. ಆದ್ರೆ ಸಿರಾಜ್ ತಪ್ಪಾಗಿ ಅರ್ಥೈಸಿಕೊಂಡರು. ಇದು ಸ್ವಲ್ಪ ಜಾಸ್ತಿ ಆಯ್ತು ಎಂದು ಹೆಡ್ ಸ್ಪಷ್ಟನೆ ನೀಡಿದ್ದರು.
ಸಿರಾಜ್ ಪ್ರತಿಕ್ರಿಯೆ ಏನು?
ಮರುದಿನ ಹರ್ಭಜನ್ ಸಿಂಗ್ ಅವರೊಂದಿಗೆ ನಡೆದ ಚುಟುಕು ಸಂದರ್ಶನದಲ್ಲಿ ಈ ಕುರಿತು ಮಾತನಾಡಿದ್ದ ಸಿರಾಜ್, ಹೆಡ್ ಹೇಳಿಕೆಯನ್ನು ನಿರಾಕರಿಸಿದ್ದರು. ʻಚೆನ್ನಾಗಿ ಬೌಲ್ ಮಾಡಿದ್ದಿʼ ಎಂಬುದಾಗಿ ಹೆಡ್ ಹೇಳಲೇ ಇಲ್ಲ. ಒಳ್ಳೆಯ ಎಸೆತವನ್ನು ಸಿಕ್ಸರ್ಗೆ ಬಾರಿಸಿದಾಗ, ಅದು ನಿಮ್ಮಲ್ಲಿ ವಿಭಿನ್ನವಾಗಿ ಕಿಚ್ಚು ಹೊತ್ತಿಸುತ್ತದೆ. ನಾನು ಅವರನ್ನು ಬೌಲ್ಡ್ ಮಾಡಿದಾಗ ನಾನು ಸಂಭ್ರಮಿಸಿದ್ದೆ ಅಷ್ಟೆ. ಆಗ ಅವರು ನನ್ನನ್ನು ನಿಂದಿಸಿದರು. ಅವರು ನನಗೆ ಹೇಳಿದ್ದು ಅದನ್ನಲ್ಲ ಎನ್ನುವುದು ಎಲ್ಲರಿಗೂ ಕಾಣುವಂತಿದೆ. ನಾವು ಎಲ್ಲರನ್ನೂ ಗೌರವಿಸುತ್ತೇವೆ. ಏಕೆಂದರೆ ಕ್ರಿಕೆಟ್ ಜೆಂಟಲ್ಮನ್ಗಳ ಆಟ ಎಂದು ತಿಳಿಸಿದ್ದರು.