ಬೆಂಗಳೂರು: ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಕೇಳಿ ಬಂದಿದ್ದ ಆರೋಪ ತನಿಖೆಯಲ್ಲಿ ರುಜವಾಗಿದೆ.. ಎಸ್ಐಟಿ ತನಿಖಾ ತಂಡ ಇದೀಗ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾಗಾದರೆ ಎಷ್ಟು ಪುಟಗಳು.. ಆರೋಪ ಪಟ್ಟಿಯಲ್ಲಿ ಯಾವೆಲ್ಲಾ ಅಂಶಗಳನ್ನು ಉಲ್ಲೇಖವಾಗಿವೆ ಅನ್ನೋದನ್ನು ಹೇಳ್ತೀವಿ ನೋಡಿ.
ಯೆಸ್.. ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಇದೀಗ ಎದುರಾಗಿದೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿಬಂದಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಕೇಳಿ ಬಂದಿದ್ದು, ಈ ಆರೋಪ ತನಿಖೆಯಲ್ಲಿ ರಜುವಾತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.
Supreme Court Recruitment: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ! ಆಸಕ್ತರು ಇವತ್ತೇ ಅಪ್ಲೈ ಮಾಡಿ
ಹೌದು.. ಶಾಸಕ ಹೆಚ್ಐವಿ ಪೀಡಿತರ ಬಳಸಿ ವಿರೋಧಿಗಳಿಗೆ ಏಡ್ಸ್ ಹರಡಲು ಯತ್ನಿಸಿದ್ದು ನಿಜ. ನಿರಂತರ ಅತ್ಯಾಚಾರ, ಅಪಾಯಕಾರಿ ರೋಗ ಹರಡುವಿಕೆ ಸೆಕ್ಷನ್ ಅಡಿ ಕೇಸ್ ದಾಖಲಿಸಿರುವಂತ ಎಸ್ಐಟಿ, ಜನಪ್ರತಿನಿಧಿಗಳ ನ್ಯಾಯಾಲಕ್ಕೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದೆ. ಹೀಗಾಗಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿರುವಂತ ಎಸ್ಐಟಿ ಅಧಿಕಾರಿಗಳು, ಅದರಲ್ಲಿ ಐಪಿಸಿ 270ರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ ಉಲ್ಲೇಖಿಸಿದ್ದಾರೆ.
ಅಲ್ಲದೇ ತಮ್ಮ ವಿರೋಧಿಗಳನ್ನು ಹೆಚ್ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್ಐಟಿ ಸಲ್ಲಿಸಿದ ಚಾರ್ಜ್ಶೀಟ್ನಲ್ಲಿ ಉಲ್ಲೇಖವಾಗಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.
ಇನ್ನೂ ಐಪಿಸಿ 354ಎ ಲೈಂಕಿಕ ಕಿರುಕುಳ, 354ಸಿ ಅನುಮತಿ ಇಲ್ಲದೇ ಮಹಿಳೆಯ ಅಶ್ಲೀಲ ದೃಶ್ಯಾವಳಿ ಚಿತ್ರೀಕರಣ, 376(2) ಎನ್ ನಿರಂತರ ಅತ್ಯಾಚಾರ, 308 ಸಂತ್ರಸ್ತೆಯ ಕೊಲ್ಲುವ ಉದ್ದೇಶ, 120ಬಿ ಅಪರಾಧಿಕ ಸಂಚು, 504 ಉದ್ದೇಶ ಪೂರ್ವಕ ಅವಮಾನ, 506 ಜೀವ ಬೆದರಿಕೆ, 270 ಅಪಾಯಕಾರಿ ರೋಗ ಹರಡುವಿಕೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ಸೇರಿದಂತೆ ಇತರೆ ಕಾಯ್ದೆಗಳ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದೆ.
ಇನ್ನೂ ಈ ಪ್ರಕರಣ ಸಂಬಂಧ ಎಸ್ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್ಪಿಸಿ 164ರಡಿ 8 ಜನರ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಎಸ್ಐಟಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.