ಬೆಂಗಳೂರು: ಸರ್ಕಾರವೇ ಸಾಲ ನೀಡಿದ್ದರೆ ಜನ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನ ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆಯುತ್ತಿದ್ದಾರೆ.
ಸರ್ಕಾರವೇ ಸಾಲ ನೀಡಿದ್ದರೆ ಜನ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ. ಮೈಕ್ರೋ ಫೈನಾನ್ಸ್ ನ ಮೀಟರ್ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಸರ್ಕಾರ ‘ ಸಾಲ ನೀಡದ ಕಾರಣ ಜನ ಮೈಕ್ರೋ ಫೈನಾನ್ಸ್ ಗಳ ಮೊರೆ ಹೋಗಿದ್ದಾರೆ ಎಂದರು.
OnePlus Nord 4: 25 ಸಾವಿರಕ್ಕಿಂತಲೂ ಕಡಿಮೆಗೆ ಖರೀದಿಸಿ ಒನ್ ಪ್ಲಸ್ ನಾರ್ಡ್-4..! ಈ ಆಫರ್ ಮಿಸ್ ಮಾಡ್ಬೇಡಿ
ಪ್ರತಿ ಬಜೆಟ್ನಲ್ಲೂ ಅನುದಾನ ಶೇ.20 ರಷ್ಟು ಹೆಚ್ಚಾಗಬೇಕು. ಬಿಜೆಪಿ ಸರ್ಕಾರ ಪ್ರತಿ ಇಲಾಖೆಗೆ ನೀಡುತ್ತಿದ್ದ ಅನುದಾನಕ್ಕಿಂತ ಕಾಂಗ್ರೆಸ್ ಸರ್ಕಾರ ಕಡಿಮೆ ಅನುದಾನ ನೀಡುತ್ತಿದೆ. ಅಲ್ಲದೆ, ನಿಗಮ-ಮಂಡಳಿ ಅನುದಾನಕ್ಕೂ ಕತ್ತರಿ ಹಾಕಿದೆ. ಇಲಾಖೆ ಮತ್ತು ನಿಗಮಗಳಿಗೆ ಹಣದ ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್ಗಳು ನೀಡುತ್ತಿವೆ ಎಂದು ಕಿಡಿಕಾರಿದರು.