ಚಿನ್ನದ ಬೆಲೆ ಕೆಲವೆಡೆ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 10 ಪೈಸೆಯಷ್ಟು ಕಡಿಮೆ ಆಗಿದೆ. ಅಮೆರಿಕದ ಫೆಡರಲ್ ರಿಸರ್ವ್ ತನ್ನ ಬಡ್ಡಿದರ ಪರಿಷ್ಕರಣೆ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವವರೆಗೂ ಇದೇ ಸ್ಥಿತಿ ಮುಂದುವರಿಯಬಹುದು ಎಂಬ ಎಣಿಕೆ ಇದೆ.
ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,490 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 12ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,270 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 749 ರೂ