ಮಂಡ್ಯ:– ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಯಿತು.
ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ: ಜನಾರ್ದನ್ ರೆಡ್ಡಿ ಕಿಡಿ!
ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ 15 ವೈದಿಕರ ತಂಡದಿಂದ ವಿಧಿ-ವಿಧಾನ ಕಾರ್ಯಗಳು ನಡೆದವು, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಲಾಯಿತು ಈ ವೇಳೆ 1000 ಕೇಜಿಯಷ್ಟು ಗಂಧದ ಮರದ ತುಂಡುಗಳನ್ನು ಬಳಸಲಾಗಿದೆ..
ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ಹುಟ್ಟುರಾದ ಸೋಮನಹಳ್ಳಿಯಲ್ಲಿಂದು ಒಕ್ಕಲಿಗ ಸಂಪ್ರದಾಯದಂತೆ ನಡೆದಿದೆ. ಬಳಿಕ ಮೊಮ್ಮಗ ಅಮರ್ತ್ಯ ಹೆಗ್ಡೆ, ತಮ್ಮ ಅಜ್ಜ ಎಸ್.ಎಂ.ಕೃಷ್ಣ ಅವರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ರಾಜಕೀಯ ಮುತ್ಸದಿ ಎಸ್ಎಂಕೆ ಪಂಚಭೂತಗಳಲ್ಲಿ ಲೀನರಾದರು.
ಅಗ್ನಿ ಸ್ಪರ್ಶಕ್ಕೂ ಮುನ್ನ ಎಸ್ಎಂ ಕೃಷ್ಣ ಅವರ ಚಿತೆಗೆ ಪತ್ನಿ ಪ್ರೇಮಾ, ಪುತ್ರಿಯರು, ಸಂಬಂಧಿಕರು ಗಂಧದ ಕಟ್ಟಿಗೆ ಇಟ್ಟು ವಿದಾಯ ಹೇಳಿದರು. ಬಳಿಕ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆಯಿಂದ ಮೃತರ ಗೌರವಾರ್ಥವಾಗಿ ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವ ಸಲ್ಲಿಸಲಾಯಿತು. ಪಾರ್ಥಿವ ಶರೀರದ ಮೇಲೆ ಹೊದಿಸಲಾಗಿದ್ದ ತ್ರಿವರ್ಣ ಧ್ವಜವನ್ನು ಗೌರವ ಪೂರ್ವಕವಾಗಿ ಎಸ್.ಎಂ.ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ಹಸ್ತಾಂತರಿಸಲಾಯ್ತು.
ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ ಎಲ್ಲರಿಗೂ ನೋವನ್ನು ತಂದಿದೆ. ಉತ್ತಮ ರಾಜಕಾರಣಿಯಾಗಿದ್ದ ಇವರ ಸಾವು ಇದೀಗ ಎಲ್ಲರನ್ನೂ ಮೌನಕ್ಕೆ ಎಡೆಮಾಡಿಕೊಟ್ಟಿದೆ. ಇನ್ನು ರಾಜ್ಯಕ್ಕೆ ಇವರ ಕೊಡುಗೆ ಅಪಾರ. ಹಲವು ಅಭಿವೃದ್ಧಿ ಕೆಲಸಗಳನ್ನು ಇವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ್ದರು.