ಬೆಂಗಳೂರು: ದೇಶ ಕಂಡ ಮೇಧಾವಿ, ಅಪ್ರತಿಮ ನಾಯಕ ಎಸ್. ಎಂ. ಕೃಷ್ಣ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಎಸ್.ಎಂ.ಕೃಷ್ಣ ಅವರ ಅಗಲಿಕೆಯಿಂದ ದೇಶ ಒಬ್ಬ ಹಿರಿಯರು, ಮಾರ್ಗದರ್ಶಕರನ್ನು ಕಳೆದುಕೊಂಡು ಬಡವಾಗಿದೆ. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪರಿಶುದ್ಧವಾದ ಬದುಕು ನಡೆಸಿ, ಆದರ್ಶಮಯ ಜೀವನ ನಡೆಸಿ, ಇಡೀ ಭಾರತಕ್ಕೆ ಪ್ರಿಯರಾಗಿರುವಂತಹವರು.
ಕೃಷ್ಣ ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದ ನಂತರ ತಮ್ಮ ಸಮಾಜವಾದಿ ಮನೋಭಾವನೆ ಬಿಟ್ಟುಕೊಡದೇ ಪಥಮ ಬಾರಿಗೆ ಸ್ವತಂತವಾಗಿ ಸ್ಪರ್ಧೆ ಮಾಡಿ ಗೆದ್ದು ಬಂದಿದ್ದರು. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ನಾಲ್ಕೂ ಸದನಗಳಲ್ಲಿ ಸೇವೆ ಮಾಡಿದ್ದಾರೆ. ರಾಜ್ಯದ ಮಂತ್ರಿಗಳಾಗಿ, ಮುಖ್ಯಮಂತ್ರಿಗಳಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರದ ಸಚಿವರಾಗಿ ದೇಶದ ಸೇವೆ ಹಾಗೂ ರಾಜ್ಯದ ಸೇವೆ ಮಾಡಿದ್ದಾರೆ.
Chanakya Niti: ಗಂಡ-ಹೆಂಡತಿ ಮಧ್ಯೆ ಇಷ್ಟೆಲ್ಲಾ ವಯಸ್ಸಿನ ಅಂತರ ಇದ್ರೆ ಸಂಸಾರ ಹಾಳಾಗುತ್ತಂತೆ!
ರಾಜಕಾರಣಿಗಳಿಗೆ ಆದರ್ಶವಾಗಿರುವ, ಆಡಳಿತಗಾರರಿಗೆ ಮಾರ್ಗದರ್ಶನವಾಗಿರುವ ಅವರ ಭಾಷೆ, ಮಿತವ್ಯಯದ ಮಾತು, ಅವರ ನಡವಳಿಗೆ ನಮ್ಮ ಯುವ ರಾಜಕಾರಣಿಗಳಿಗೆ ಅತ್ಯಂತ ಅವಶ್ಯವಿದೆ. ಅವರು ಕರ್ನಾಟಕದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬೆಂಗಳೂರಿನ ಬೆಳವಣಿಗೆ, ಐಟಿ-ಬಿಟಿ ವಿಚಾರದಲ್ಲಿ ಅವರು ನೀಡಿದ ಕೊಡುಗೆ ಅಪಾರ, ಅವರು ಜಾರಿಗೆ ತಂದಿರುವ ಮಿಡ್ ಡೆ ಮೀಲ್ ಯೋಜನೆ ಯಶಸ್ವಿಯಾಗಿದೆ. ಅವರು ರಾಜಕಾರಣದಲ್ಲಿ ಯಾವುದೇ ಹುದ್ದೆಯಲ್ಲಿದ್ದರೂ ಕೂಡ ತಮ್ಮ ವ್ಯಕ್ತಿತ್ವವನ್ನು ಬಿಟ್ಟುಕೊಡದೇ ಅತ್ಯಂತ ಸ್ವಾಭಿಮಾನದ ಬದುಕು ನಡೆಸಿದರು.
ಅವರು ಬಿಜೆಪಿ ಸೇರಿ ನಮ್ಮ ಪಧಾನ ಮಂತ್ರಿಗಳಿಗೆ ಅತ್ಯಂತ ಹತ್ತಿರದ ನಾಯಕರಾಗಿದ್ದರು. ಹಿಂದಿನ ಪೀಳಿಗೆಯ ಮಹತ್ವದ ಘಟ್ಟ ಕಳೆದುಕೊಂಡಂತಾಗಿದೆ. ಬರುವಂತಹ ದಿನಗಳಲ್ಲಿ ಅವರ ಬದುಕು ನಮಗೆ ಆದರ್ಶವಾಗಲಿ, ಎಸ್.ಎಂ. ಕೃಷ್ಣ ಅವರು ನನಗೆ ವಯಕ್ತಿಕವಾಗಿ ಅತ್ಯಂತ ಹತ್ತಿರವಾಗಿದ್ದ ನಾಯಕರು, ನಮ್ಮ ತಂದೆಯ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದ ನಾಯಕರಾಗಿದ್ದರು. ಅವರ ಅಗಲಿಗೆ ನನಗೆ ಬಹಳ ನೋವು ತಂದಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.