ರಾಜ್ಯಕ್ಕೆ SM ಕೃಷ್ಣ ಅವರ ಕೊಡುಗೆ ಅಪಾರ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ.
ಎಂಜಿ, ಬ್ರಿಗೇಡ್ ರಸ್ತೆಯಲ್ಲಿ ಹೊಸವರ್ಷ ಸಂಭ್ರಮಾಚರಣೆಗಿಲ್ಲ ನಿರ್ಬಂಧ ಇಲ್ಲ: ಜಿ ಪರಮೇಶ್ವರ್!
ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರತಿಯೊಬ್ಬರು ಎಸ್.ಎಂ. ಕೃಷ್ಣರನ್ನು ನೆನಪಿಸಿಕೊಳ್ಳಲೇಬೇಕು. ಅವರು ರಾಜ್ಯಕ್ಕೆ ಕೊಟ್ಟಿರುವ ಕೊಡುಗೆ ಅಪಾರ. ಬೆಂಗಳೂರು ಆಗಿರಬಹುದು ಎಲ್ಲೇ ಆಗಿದ್ರೂ ಅವರು ಮಾಡಿರುವ ಕೆಲಸ ನಮ್ಮ ಮುಂದಿದೆ. ಅವರು ಎಷ್ಟು ಅದ್ಭುತವಾದ ಬದುಕನ್ನು ಬದುಕಿದ್ದಾರೆ ಎಂಬುದು ನಮಗೆಲ್ಲಾ ಗೊತ್ತು. ಅವರದ್ದು ಧೀಮಂತ ವ್ಯಕ್ತಿತ್ವವಾಗಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯಶ್ ಮಾತನಾಡಿದರು.
ಅವರು ನಿಧನರಾದ ಸಂದರ್ಭದಲ್ಲಿ ನಾನು ಊರಲ್ಲಿ ಇರಲಿಲ್ಲ. ನಮ್ಮ ಪ್ರತಿ ಕೆಲಸಕ್ಕೂ ಎಸ್.ಎಂ. ಕೃಷ್ಣರವರ ಹಾರೈಕೆ ಇತ್ತು. ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ಯಶ್ ಹೇಳಿದ್ದಾರೆ.