ಮೈಸೂರು: ಸ್ನೇಹಮಯಿ ಕೃಷ್ಣ ಒಬ್ಬ ರೌಡಿಶೀಟರ್, ಅವನ ವಿರುದ್ಧ 44 ಕೇಸ್ʼಗಳಿವೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸ್ನೇಹಮಯಿ ಕೃಷ್ಣ ರೌಡಿಶೀಟರ್, ಆತನ ವಿರುದ್ಧ 44 ಕೇಸ್ಗಳಿವೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ದಾಖಲೆ ಬಿಡುಗಡೆ ಮಾಡುತ್ತಿದ್ದಾನೆ. ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದ್ದಾನೆ’ ಎಂದು ಲಕ್ಷ್ಮಣ್ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಸ್ನೇಹಮಯಿ ಕೃಷ್ಣನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ರೌಡಿಶೀಟರ್ ಆಗಿರುವ ಸ್ನೇಹಮಯಿ ಸುಳ್ಳು ದಾಖಲೆ ನೀಡಿದ್ದಾನೆ. ಸಿಎಂ ಪತ್ನಿ ಪಾರ್ವತಿ ಹೆಸರಲ್ಲಿ ಸುಳ್ಳು ದಾಖಲೆಗಳನ್ನು ನೀಡಿದ್ದಾನೆ. ಆತ ಬಿಡುಗಡೆ ಮಾಡಿರುವ ಚಲನ್ ಹಣ ಕಟ್ಟಿರುವ ದಾಖಲೆ ಸುಳ್ಳು. ದಾಖಲೆಗಳು ಸುಳ್ಳು ಎಂದು ಮುಡಾ ಅಧಿಕಾರಿಗಳೇ ಹೇಳುತ್ತಾರೆ. ಕೂಡಲೇ ಸ್ನೇಹಿಮಯಿ ಕೃಷ್ಣನನ್ನು ಪೊಲೀಸರು ಬಂಧಿಸಬೇಕು. ಬಂಧಿಸದಿದ್ದರೆ ನಾಳೆಯಿಂದ ಧರಣಿ ಸತ್ಯಾಗ್ರಹ ಮಾಡುತ್ತೇವೆ ಎಂದು ಲಕ್ಷ್ಮಣ್ ಎಚ್ಚರಿಕೆ ನೀಡಿದ್ದಾರೆ.