ಹುಬ್ಬಳ್ಳಿ; ನಗರದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಗುರೂಜಿಯವರು ಗೌರವ ಡಾಕ್ಟರ್ ಪ್ರಶಸ್ತಿ ಪುರಸ್ಕೃತರು ಹಾಗೂ ಸರ್ವಧರ್ಮ ಸಮಾಜ ಸೇವಕರಾದ ಡಾ.ರಮೇಶ ಮಹಾದೇವಪ್ಪನವರಿಗೆ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದರು .
ಡಾ.ರಮೇಶ ಮಹಾದೇವಪ್ಪನವರ ಮಾತನಾಡಿ, ಸಮಾಜದ ಸ್ವಾಸ್ಥ್ಯ ಕ್ಕಾಗಿ ಸಮಾಜ ಮುಖಿಯಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಜನಜಾಗೃತಿ ವೇದಿಕೆಯ ಅಧ್ಯಕ್ಷರು ಹಾಗೂ ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಪಿರಾಜಿ ಖಂಡೇಕಾರ, ಸಂತೋಷ್ ಶೆಟ್ಟಿ, ಶ್ರೀಮತಿ ಸವಿತಾ ಅಮರ್ ಶೆಟ್ಟಿ, ಶ್ರೀ ಮಾರುತಿ ಶೆಟ್, ಸೇರಿದಂತೆ ಇನ್ನೂ ಅನೇಕ ಗಣ್ಯರು ಗ್ರಾಮ ಅಭಿವೃದ್ಧಿ ಯೋಜನೆಯ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.