ಹಾಸನ: 34ರ ಹರೆಯದ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಅವರ ಆತ್ಮಹತ್ಯೆ ಪ್ರಕರಣ ದೇಶದಾದ್ಯಂತ ಸುದ್ದಿಯಲ್ಲಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಕೂಡ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆಯೇ ಪತ್ನಿ ಕಾಟಕ್ಕೆ ಬೇಸತ್ತು ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಶೆಟ್ಟಿಹಳ್ಳಿ ಗ್ರಾಮದ ಬಳಿಯ ಹೇಮಾವತಿ ನದಿಯಲ್ಲಿ ನಡೆದಿದೆ.
SIM Card New Rules: ಹೊಸ ಸಿಮ್ ಖರೀದಿಸೋ ಪ್ಲಾನ್ʼನಲ್ಲಿದ್ದೀರಾ..? ಹಾಗಿದ್ರೆ ಈ ರೂಲ್ಸ್ ತಿಳಿಯಲೇಬೇಕು
ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಹಾಸನದ ಇಂದಿರಾನಗರದ ನಿವಾಸಿ ಪ್ರಮೋದ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್ ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ನಾಪತ್ತೆಯಾಗಿದ್ದರು. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.