ಕಲಬುರ್ಗಿ:- ಬಿಜೆಪಿಯಲ್ಲಿ ಮಾಜಿ ಸಚಿವ ಬಿ ಸೋಮಣ್ಣ ಅಸಮಾಧಾನ ವಿಚಾರವಾಗಿ ಮಾಜಿ DCM ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ವಿ ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ನಮ್ಮ ಪಕ್ಷದಲ್ಲಿ ಅವರಿಗೆ ಸಂಪೂರ್ಣ ಗೌರವ ಇದೆ, ಅವರನ್ನು ವಿಶ್ವಾಸದಿಂದ ಕರೆದುಕೊಂಡು ಹೋಗುವ ಕೆಲಸ ಬಿಜೆಪಿ ಮಾಡ್ತದೆ. ಚುನಾವಣೆ ಅಂದ ಮೇಲೆ ಸೋಲು ಗೆಲುವು ಸಹಜ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು
ಸೋಮಣ್ಣನವರೇ ಪದೇ ಪದೇ ಈ ಮಾತು ಹೇಳ್ತಿದ್ದಾರೆ. ಸೋಮಣ್ಣ ಇಂದು, ಮುಂದು ಎಂದೆಂದೂ ನಮ್ಮ ಜೊತೆಯೇ ಇರ್ತಾರೆ. ಅವರ ನೋವು ಅಳಲು ದೂರ ಮಾಡುವ ಕೆಲಸ ಬಿಜೆಪಿಯಿಂದ ಆಗುತ್ತದೆ ಎಂದು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.