ತುಮಕೂರು: ತುಮಕೂರಿನ ಕ್ಯಾತ್ಸಂದ್ರ ಬಳಿಯಿರುವ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದು ಡಾ.ಶಿವಕುಮಾರಶ್ರೀಗಳ ಗದ್ದುಗೆ ದರ್ಶನ ಪಡೆದರು.
ನಗರ ಶಾಸಕ ಜ್ಯೋತಿ ಗಣೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ. ಪತ್ನಿ ಶೈಲಜಾ ಜೊತೆ ಮಠಕ್ಕೆ ಆಗಮಿಸಿರುವ ವಿ.ಸೋಮಣ್ಣ.
ತುಮಕೂರು ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಬಳಿ ವಿ.ಸೋಮಣ್ಣ ಬೇಸರವ್ಯಕ್ತಪಡಿಸಿದ್ದಾರೆ.
‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ‘ಅಮಿತ್ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು’ 2 ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ರು, ಆಗಲ್ಲ ಅಂತಾ ಹೇಳಿದ್ದೆ. ಪ್ರಧಾನಿ ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಅಂದ್ರು, ಎಂದು ಸಿದ್ದಲಿಂಗ ಸ್ವಾಮೀಜಿ ಎದುರು ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.