ಕಲಬುರ್ಗಿ:- ಬಿಜೆಪಿಯಲ್ಲಿ ಮಾಜಿ ಸಚಿವ ಬಿ ಸೋಮಣ್ಣ ಅಸಮಾಧಾನ ವಿಚಾರವಾಗಿ ಮಾಜಿ DCM ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿ ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ನಮ್ಮ ಪಕ್ಷದಲ್ಲಿ ಅವರಿಗೆ ಸಂಪೂರ್ಣ ಗೌರವ ಇದೆ,
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಅವರನ್ನು ವಿಶ್ವಾಸದಿಂದ ಕರೆದುಕೊಂಡು ಹೋಗುವ ಕೆಲಸ ಬಿಜೆಪಿ ಮಾಡ್ತದೆ. ಚುನಾವಣೆ ಅಂದ ಮೇಲೆ ಸೋಲು ಗೆಲುವು ಸಹಜ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಸೋಮಣ್ಣನವರೇ ಪದೇ ಪದೇ ಈ ಮಾತು ಹೇಳ್ತಿದ್ದಾರೆ. ಸೋಮಣ್ಣ ಇಂದು, ಮುಂದು ಎಂದೆಂದೂ ನಮ್ಮ ಜೊತೆಯೇ ಇರ್ತಾರೆ. ಅವರ ನೋವು ಅಳಲು ದೂರ ಮಾಡುವ ಕೆಲಸ ಬಿಜೆಪಿಯಿಂದ ಆಗುತ್ತದೆ ಎಂದು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.