ಪುಣೆ: ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹೇಳಿದ್ದಾರೆ. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ವಲಸೆಗಳನ್ನು ತಪ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಭಾರತ ಸೇರಿ ಹಲವು ದೇಶಗಳಲ್ಲಿ ಇತ್ತೀಚಿಗೆ ದೊಡ್ಡ ಪ್ರಮಾಣದಲ್ಲಿ ಹವಾಮಾನ ಬದಲಾಗುತ್ತಿದ್ದು ಉಷ್ಣಾಂಶದಲ್ಲಿ ಸಾಕಷ್ಟು ಏರಿಳಿತ ನೋಡುತ್ತಿದ್ದೇವೆ. ಮುಂದಿನ 2 ದಶಕಗಳಲ್ಲಿ ಕೆಲ ದೇಶಗಳು ಭಾರತದ ಕಡೆ ನೋಡುವ ಸಂಭವ ಇದೆ.
ಸಾಲು-ಸಾಲು ಕಷ್ಟಗಳಿಂದ ಬೇಸತ್ತಿದ್ದೀರಾ.? ಸೋಮವಾರ ಈ ಕೆಲಸ ಮಾಡಿದ್ರೆ ಶಿವನ ಕೃಪೆ ನಿಮಗಿರುತ್ತದೆ!
ಬೆಂಗಳೂರು, ಹೈದರಾಬಾದ್, ಪುಣೆಗೆ ವಲಸೆ ಹೆಚ್ಚಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಟ್ರಾಫಿಕ್ ಸಮಸ್ಯೆ, ಮಾಲಿನ್ಯದ ಕಾರಣ ಈ ನಗರಗಳ ಸ್ಥಿತಿ ಹದಗೆಡಬಹುದು. ಹೀಗಾಗಿ ವಲಸೆ ತಡೆಗೆ ಸರ್ಕಾರಗಳು ಅಗತ್ಯ ಕ್ರಮ ತೆಗದುಕೊಳ್ಳಬೇಕು ಎಂದು ಸಲಹೆ ನೀಡಿದರು.