ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯಾ ಹಾಗೂ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಬಡವರ ಹಾಗೂ ರೈತರ ಸಂಕಷ್ಟ ಸ್ಪಂದಿಸುವ ಕೆಲಸ ಮಾಡದೇ ಐಷಾರಾಮಿ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಮಾಡುವ ಮೂಲಕ ನಾಡಿನ ಜನತೆಗೆ ದ್ರೋಹ ಬಗೆದಿದ್ದಾರೆ ಎಂದು ರತ್ನ ಭಾರತ ರೈತ ರಾಷ್ಟ್ರೀಯ ಸಮಿತಿ ಉಪಾಧ್ಯಕ್ಷ ಹೇಮನಗೌಡರ ಬಸನಗೌಡರ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಯಾರದ್ದೋ ದುಡ್ಡು ಆಕಾಶದಲ್ಲಿ ಜಾತ್ರೆ’ ‘ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಬರಗಾಲದಿಂದ ಬೇಯುತ್ತಿದೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ. ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತಮ್ಮ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಾ, ಸಚಿವ ಜಮೀರ್ ಅಹಮದ್ ಖಾನ್ ಜತೆ ಜನರ ತೆರಿಗೆ ಹಣ ವ್ಯಯಿಸಿ ಐಷಾರಾಮಿ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೋಜಿನ ಭಾಗವಾಗಿರುವುದು ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನೂ ಅಲ್ಲ’
‘ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ ರೈತರ ಬಗ್ಗೆ ಎಷ್ಟು ಕಾಳಜಿ ಇದೆ ಅಂತಾ ಗೊತ್ತಾಗುತ್ತದೆ ಒಂದು ಕಡೆ ದಟ್ಟವಾದ ಬರಗಾಲ ಇನ್ನೊಂದು ಕಡೆ ರೈತರ ಆತ್ಮಹತ್ಯೆ ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಬೊಟ್ಟು ಮಾಡಿ ತೋರಿಸುತ್ತಾ ಮೋಜು ಮಸ್ತಿಯಲ್ಲಿ ಸರ್ಕಾರ ಮೊಳಗಿದೆ.
ಬರದಿಂದ ಇಡೀ ರಾಜ್ಯ ತತ್ತರಿಸಿದೆ. ರೈತರಿಗೆ ನಯಾಪೈಸೆ ಪರಿಹಾರ ಕೊಟ್ಟಿಲ್ಲ. ಕೊಟ್ಟ ಆಶ್ವಾಸನೆಗಳನ್ನು ಈಡೇರಿಸದೇ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರವಾಸ ಮಾಡುತ್ತಿರುವುದು ಜನರಿಗೆ ಮಾಡುತ್ತಿರುವ ಅಪಮಾನ’ ಕರ್ನಾಟಕದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ನೀಡುವುದು ಸಹ ಯಾವ ಲೆಕ್ಕ. ಆದ್ದರಿಂದ ಸಿಎಂ ಆಪ್ತ ಬಳಗದ ದೌಲತ್ತು’
ರಾಜ್ಯ ಅತ್ಯಂತ ಸಂಕಷ್ಟದ ದಿನಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ಬಳಗ ಶ್ರೀಮಂತಿಕೆಯ ದೌಲತ್ತು ಪ್ರದರ್ಶನ ಮಾಡದೇ ಕೂಡಲೇ ರೈತರಿಗೆ ಬರಪರಿಹಾರ ಕೊಡಬೇಕು ಇಲ್ಲದಿದ್ದರೆ ಉಗ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದರು .