ಸೂಪರ್-8ರ ಮೊದಲ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯಕ್ಕೆ ಬಾರ್ಬಡೋಸ್ನ ಬ್ರಿಡ್ಜ್ಟೌನ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣ… ಪ್ರತ್ಯಕ್ಷ ಸಾಕ್ಷಿಗಳು ಇದ್ದಾರೆಂದ ಪೊಲೀಸರು!
ಟಿ20 ವಿಶ್ವಕಪ್ 2024 ರ ಸೂಪರ್-8 ಸುತ್ತು ಪ್ರಾರಂಭವಾಗಿದ್ದು, ಟೀಂ ಇಂಡಿಯಾ ಇಂದು ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಸೂಪರ್-8ರ ಮೊದಲ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಿವೆ. ಈ ಪಂದ್ಯಕ್ಕೆ ಬಾರ್ಬಡೋಸ್ನ ಬ್ರಿಡ್ಜ್ಟೌನ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಭಾರತ ತಂಡ ಗ್ರೂಪ್ ಹಂತದಲ್ಲಿ ಆಡಿದ 4 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇನ್ನು ಈ ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಕೆರಿಬಿಯನ್ ಮೈದಾನದಲ್ಲಿ ಆಡಲಿದೆ. ಆದರೆ ಅಫ್ಘಾನಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ವೆಸ್ಟ್ ಇಂಡೀಸ್ನಲ್ಲಿ ಆಡಿದೆ. ಅಲ್ಲದೆ ಟೀಂ ಇಂಡಿಯಾದ ಬ್ಯಾಟ್ಸ್ಮನ್ಗಳ ಪ್ರದರ್ಶನ ಇಲ್ಲಿಯವರೆಗೆ ಉತ್ತಮವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ವಿಶ್ವಕಪ್ನಲ್ಲಿ ಉತ್ತಮ ಫಾರ್ಮ್ ತೋರಿರುವ ಅಫ್ಘಾನಿಸ್ತಾನದ ಸವಾಲು ಭಾರತಕ್ಕೆ ಅಷ್ಟು ಸುಲಭವಲ್ಲ