ಸ್ಯಾಂಡಲ್ವುಡ್ ನಟಿ ಸೋನಲ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಆಗಸ್ಟ್ 10 ಹಾಗೂ 11ರಂದು ಮದುವೆ ನಡೆಯಲಿದ್ದು ಮದುವೆಗೆ ಸಕಲ ಸಿದ್ದತೆಗಳು ನಡೆಯುತ್ತಿದೆ. ಈ ಮಧ್ಯೆ ನಟಿ ಸೋನಲ್ ಮದುವೆ ಶಾಪಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಸೋನಲ್ ಶಾಪಿಂಗ್ ಮಾಡುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮದುವೆಗೆ ಜವಳಿ ಖರೀದಿ ಮಾಡೋದ್ರಲ್ಲಿ ನಟಿ ತೊಡಗಿಸಿಕೊಂಡಿದ್ದಾರೆ. ಬಟ್ಟೆ ಶಾಪ್ವೊಂದರಲ್ಲಿ ಅಮ್ಮನ ಜೊತೆ ಸೋನಲ್ ಸೀರೆ ಖರೀದಿ ಮಾಡುತ್ತಿರುವ ಫೋಟೋ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ವಿಶೇಷ ಫೋಟೋಶೂಟ್ ಹಂಚಿಕೊಂಡು ಮದುವೆ ಬಗ್ಗೆ ಈ ಜೋಡಿ ಸಿಹಿಸುದ್ದಿ ಕೊಟ್ಟಿದ್ದರು. ಇತ್ತೀಚೆಗೆ ನವರಂಗ್ ಥಿಯೇಟರ್ನಲ್ಲಿ ಈ ವಿಡಿಯೋ ಶೂಟ್ ಮಾಡಿದ್ದು, ಸಿನಿಮಾ ಸೀನ್ ರೀತಿಯೇ ತರುಣ್ ಮತ್ತು ಸೋನಲ್ ವಿಡಿಯೋ ಮೂಡಿ ಬಂದಿದೆ. ಸಿನಿಮಾಟೋಗ್ರಾಫರ್ ಎ.ಜೆ ಶೆಟ್ಟಿ ಈ ವಿಡಿಯೋ ಶೂಟ್ ಮಾಡಿದ್ದಾರೆ.
ಇದೇ ಆಗಸ್ಟ್ 10, 11ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಬೆಂಗಳೂರಿನ ಪೂರ್ಣಿಮಾ ಪ್ಯಾಲೇಸ್ನಲ್ಲಿ ಆಗಸ್ಟ್ 10ರಂದು ಸಂಜೆ 6:30 ನಂತರ ಆರತಕ್ಷತೆ ಕಾರ್ಯಕ್ರಮ, ಆ.11ರಂದು ಬೆಳಗ್ಗೆ 10:50 ರಿಂದ 11:35ರ ಶುಭ ಮುಹೂರ್ತದಲ್ಲಿ ತರುಣ್ ಮತ್ತು ಸೋನಲ್ ಮದುವೆ ನಡೆಯಲಿದೆ. ಹಿಂದೂ ಸಂಪ್ರದಾಯದಂತೆ ಮದುವೆ ನಡೆಯಲಿದೆ.