ಅಕ್ರಮವಾಗಿ ಮಗುವನ್ನು ಮನೆಯಲ್ಲಿ ಇಟ್ಟುಕೊಂಡು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಪರಪ್ಪನ ಅಗ್ರಹಾರ ಜೈಲಿನಿಂದ ಶನಿವಾರ ರಾತ್ರಿ ಬಿಡುಗಡೆ ಆಗಿದ್ದಾರೆ.
ಕಾನೂನುಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ಸೋನು ಶ್ರೀನಿವಾಸ್ ಗೌಡ ಇದೀಗ 11 ದಿನಗಳ ಬಳಿಕ ರಿಲೀಸ್ ಆಗಿದ್ದಾರೆ. ಬಿಡುಗಡೆ ಬಳಿಕ ಅಕ್ಕನ ಜೊತೆ ಮನೆಗೆ ತೆರಳಿದ್ದಾರೆ.
ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಷರತ್ತನ್ನು ನ್ಯಾಯಾಧೀಶರು ವಿಧಿಸಿದ್ದರು. ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ ಶನಿವಾರ ರಾತ್ರಿ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ.