ಭೋಪಾಲ್:- ಸಿಎಂ ಆದ ಕೂಡಲೇ ಎರಡು ಮಹತ್ವದ ನಿರ್ಧಾರ ಕೈಗೊಂಡಿರುವ ಮೋಹನ್ ಯಾದವ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿದ್ದಾರೆ. ಅಲ್ಲದೆ ತೆರೆದ ಜಾಗಗಳಲ್ಲಿ ಮಾಂಸ ಮಾರಾಟವನ್ನು ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ.
ನಿಗದಿತ ಮಿತಿಯೊಳಗೆ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗುವುದು ಎಂದು ಅವರು ಒತ್ತಿ ಹೇಳಿದರು. ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕಗಳ ಅನಧಿಕೃತ ಬಳಕೆಯನ್ನು ಸಹಿಸಲಾಗುವುದಿಲ್ಲ ಎಂದು ಹೇಳಿದರು. ಮೋಹನ್ ಯಾದವ್ ಅವರು ಮಧ್ಯಪ್ರದೇಶದಲ್ಲಿ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶ ನೀಡಿದ್ದಾರೆ.
ಪ್ರತಿ ಜಿಲ್ಲೆಯಲ್ಲೂ ಯುವ ಜನರಿಗಾಗಿ ಶ್ರೇಷ್ಠತೆಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಯಾದವ್ ಹೇಳಿದರು. 52 ಕಾಲೇಜುಗಳನ್ನು ಆಯ್ಕೆ ಮಾಡಲಾಗಿದ್ದು, ಇವುಗಳನ್ನು ಪ್ರಧಾನ ಮಂತ್ರಿಗಳ ಶ್ರೇಷ್ಠ ಕಾಲೇಜುಗಳು ಎಂದು ಕರೆಯಲಾಗುವುದು. ಎಲ್ಲಾ ಕಾಲೇಜುಗಳಲ್ಲಿ ಡಿಜಿಟಲ್ ಲಾಕರ್ ಗಳ ಸೌಲಭ್ಯವಿರುತ್ತದೆ. ಪದವಿ ಅಂಕಪಟ್ಟಿಯಲ್ಲಿ ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ನಾವು ಡಿಜಿಟಲ್ ಲಾಕರ್ ಕಾಲೇಜು / ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಸಿಎಂ ಯಾದವ್ ಹೇಳಿದ್ದಾರೆ.