ಬೆಂಗಳೂರು: ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಯದುವೀರ್ ಅವರು ಮಾಜಿ ಸಿಎಂ ಯಡಿಯೂರಪ್ಪರನ್ನ ಭೇಟಿಯಾಗುತ್ತಿದ್ದಾರೆ.
ಸದಾನಂದಗೌಡಗೆ ಟಿಕೆಟ್ ಮಿಸ್– ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದೇನು? – ಇಲ್ಲಿದೆ ಡೀಟೈಲ್ಸ್!
ಯಡಿಯೂರಪ್ಪನವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಭೇಟಿಯಾಗಿ ಚರ್ಚೆ ನಡೆಸಲಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಮೈಸೂರು-ಕೊಡಗಿನ ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಅಂತ ಬರೆದುಕೊಂಡಿದ್ದಾರೆ. ಇನ್ನು ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ನಾನು ಪ್ರತಾಪ್ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಸದ್ಯ ಇಂದು ಯದುವೀರ್ ಒಡೆಯರ್ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಯದುವೀರ್ ಪಕ್ಷ ಸೇರ್ಪಡೆಯಾಗಲಿದ್ದು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಲಿದ್ದಾರೆ.