ವಾಷಿಂಗ್ಟನ್: ಕಳೆದ ವರ್ಷದ ಜೂನ್ ನಿಂದ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಕ್ಕಿಬಿದ್ದಿರುವ ಅಮೆರಿಕದ ಇಬ್ಬರು ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ನಿರೀಕ್ಷೆಗಿಂತಲೂ ಮೊದಲೇ ಭೂಮಿಗೆ ವಾಪಸಾಗುವ ಸಾಧ್ಯತೆಯಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ತಿಳಿಸಿದೆ.
ಅಮೆರಿಕದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಶೀಘ್ರದಲ್ಲೇ ಭೂಮಿಗೆ ಮರಳಲಿದ್ದಾರೆ. ಮಾರ್ಚ್ ಮಧ್ಯದಲ್ಲಿ ಭೂಮಿಗೆ ಮರಳಬಹುದು ಎಂದು ನಾಸಾ ಅಧಿಕೃತವಾಗಿ ತಿಳಿಸಿದೆ. ಇಬ್ಬರೂ ಗಗನಯಾತ್ರಿಗಳು ಕಳೆದ 8 ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದಾರೆ.
ನಾಸಾ ಮತ್ತು ಸ್ಪೇಸ್ಎಕ್ಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಮತ್ತು ಅಲ್ಲಿಂದ ಮುಂಬರುವ ಕ್ರೂ ರೊಟೇಶನ್ ಮಿಷನ್ ಟಾರ್ಗೆಟ್ ಲಾಂಚ್ ಮತ್ತು ರಿಟರ್ನ್ ಡೇಟ್ಸ್ ವೇಗಗೊಳಿಸುತ್ತಿವೆ. ಇದು ಬಾಹ್ಯಾಕಾಶದಲ್ಲಿ ಸಿಕ್ಕಿಬಿದ್ದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ನಾಸಾ ವಾಪಸ್ ಭೂಮಿಗೆ ಕರೆತರಲಿದೆ.