ದಾವಣಗೆರೆ:- ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಕ್ರೈಂ ಪ್ರಕಣಗಳು ಹೆಚ್ಚಾಗುತ್ತಿರೋದು ಆತಂಕಕ್ಕೀಡು ಮಾಡಿದೆ.
Hubballi: ಈರುಳ್ಳಿ ಬೆಳೆಗಾರರಿಗೆ ಸೂಕ್ತ ಪರಿಹಾರ ಕೊಡುವಂತೆ ರೈತರ ಆಗ್ರಹ!
ಅದರಂತೆ ದಾವಣಗೆರೆಯಲ್ಲಿ ಒಡ ಹುಟ್ಟಿದ ತಮ್ಮನನ್ನೇ ಸುಪಾರಿ ಕೊಟ್ಟು ಪಾಪಿ ಅಣ್ಣನೋರ್ವ ಕೊಲೆ ಮಾಡಿಸಿದ ಘಟನೆ ಜರುಗಿದೆ.
ಕೊಲೆಯಾದ ದುರ್ದೈವಿಯನ್ನು ಸಿದ್ದಲಿಂಗಪ್ಪ ಎಂದು ತಿಳಿಸಲಾಗಿದೆ. ಸಿದ್ದಲಿಂಗಪ್ಪ ಬೋರ್ ಪಾಯಿಂಟ್ ಮಾಡಲು ತೆರಳಿದ್ದವರು ವಾಪಸ್ ಮನೆಗೆ ಬಂದಿರಲಿಲ್ಲ. ಅವರ ಮೃತದೇಹ ನಲ್ಲೂರು ಸಮೀಪದ ಭದ್ರಾ ಉಪ ನಾಲೆಯಲ್ಲಿ ಅ.22 ರಂದು ಪತ್ತೆಯಾಗಿತ್ತು. ಈ ಬಗ್ಗೆ ಅನುಮಾನಗೊಂಡ ಸಿದ್ದಲಿಂಗಪ್ಪ ಅವರ ಸೊಸೆ ದೊಡ್ಡಮ್ಮ ಇದು ಕೊಲೆ ಎಂದು ದೂರು ನೀಡಿದ್ದರು.
ದೂರಿನ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್, ಪ್ರಭು, ಪ್ರಶಾಂತ್ ನಾಯ್ಕ, ಸುಜಾತ ಹಾಗೂ ಶಿವಮೂರ್ತಪ್ಪ ಎಂಬವವರನ್ನು ಬಂಧಿಸಿದ್ದರು. ಆರೋಪಿಗಳ ವಿಚಾರಣೆ ವೇಳೆ ಹತ್ಯೆಗೆ ಸುಪಾರಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ.
ಸಿದ್ದಲಿಂಗಪ್ಪ ಅವರಿಗೆ ಪರಮೇಶ್ವರಪ್ಪ ಹಾಗೂ ಶಿವಮೂರ್ತಪ್ಪ ಎಂಬ ಇಬ್ಬರು ಸಹೋದರರಿದ್ದರು. ಆಸ್ತಿ ವಿಚಾರವಾಗಿ ಸಿದ್ದಲಿಂಗಪ್ಪ ಹಾಗೂ ಶಿವಮೂರ್ತಪ್ಪ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಈ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ಕೂಡ ನಡೆಯುತ್ತಿತ್ತು. ಇದೇ ವಿಚಾರಕ್ಕೆ ಶಿವಮೂರ್ತಪ್ಪ ತನ್ನ ಪುತ್ರ ಸತೀಶ್ಗೆ ಚಿಕ್ಕಪ್ಪ ಸಿದ್ದಲಿಂಗಪ್ಪನನ್ನ ಹೇಗಾದರೂ ಮಾಡಿ ಮುಗಿಸು ಎಂದು ಹೇಳಿದ್ದ. ಅದರಂತೆ ಸತೀಶ್ ಸಂಚೊಂದನ್ನ ರೂಪಿಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದ ಎಂಬುದು ತನಿಖೆ ವೇಳೆ ಬೆಳಕಿಗೆ ಬಂದಿದೆ.