ಸ್ಪೇನ್ ನ ಈಶಾನ್ಯ ನಗರ ಝರಗೋಜದ ನರ್ಸಿಂಗ್ ಹೋಂ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ನರ್ಸಿಂಗ್ ಹೋಂನಲ್ಲಿ 82 ಮಂದಿಯಿದ್ದರು. ಇಲ್ಲಿ ಬುದ್ಧಿಮಾಂದ್ಯತೆ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಬೆಂಕಿಯ ತೀವ್ರ ಹೊಗೆ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.