ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಒಲಿಂಪಿಕ್ಸ್ ಸ್ಪರ್ಧಿಗಳನ್ನು ದೆಹಲಿಯ ತಮ್ಮ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಈ ವೇಳೆ ಆಟಗಾರರು ಪ್ರಧಾನಿಗೆ ತಮ್ಮ ಪದಕಗಳನ್ನು ತೋರಿಸಿದ್ದಾರೆ. ಇದರ ಜೊತೆಗೆ ಹಾಕಿ ಸ್ಟಿಕ್ ಹಾಗೂ ಆಟಗಾರರು ಸಹಿ ಮಾಡಿರುವ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ. ಆ ನಂತರ ಒಲಿಂಪಿಕ್ಸ್ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ಮನು ಭಾಕರ್, ಮೋಧಿ ಅವರಿಗೆ ಪಿಸ್ತೂಲ್ ತೋರಿಸಿದ್ದಾರೆ. ನಂತರ ಪ್ರಧಾನಿ ಮೋದಿ ಅವರು ಅಮನ್ ಸೆಹ್ರಾವತ್ ಮತ್ತು ಸ್ವಪ್ನಿಲ್ ಕುಸಾಲೆ ಅವರನ್ನು ಭೇಟಿ ಮಾಡಿ, ಅವರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇದರ ನಂತರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ದೇಶವನ್ನು ಸ್ಪರ್ಧಿಸಿದ್ದ ಅಥ್ಲೀಟ್ಗಳ ಜೊತೆ ಮೋದಿ ಮಾತುಕತೆ ನಡೆಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ ಕ್ರೀಡಾಕೂಟಕ್ಕೆ ಭಾರತದಿಂದ 47 ಮಹಿಳಾ ಕ್ರೀಡಾಪಟುಗಳು ಸೇರಿದಂತೆ 117 ಆಟಗಾರರನ್ನು ಕಳುಹಿಸಲಾಗಿತ್ತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಎರಡು ಬಾರಿ ಒಲಿಂಪಿಕ್ ಪದಕ ವಿಜೇತರಾದ ಪಿಆರ್ ಶ್ರೀಜೇಶ್ (ಹಾಕಿ) ಮತ್ತು ಮನು ಭಾಕರ್ (ಶೂಟಿಂಗ್) ರಾಷ್ಟ್ರಗಳ ಪರೇಡ್ನಲ್ಲಿ ಧ್ವಜಧಾರಿಗಳಾಗಿ ಭಾರತವನ್ನು ಪ್ರತಿನಿಧಿಸಿದ್ದರು.
ಆದಾಗ್ಯೂ, ಟೋಕಿಯೊ ಒಲಿಂಪಿಕ್ಸ್ಗೆ ಹೋಲಿಸಿದರೆ ಈ ಬಾರಿಯ ಒಲಿಂಪಿಕ್ಸ್ನಲ್ಲಿ ಭಾರತದ ಪ್ರದರ್ಶನ ಸ್ವಲ್ಪ ಕೆಳಮಟ್ಟದಲ್ಲಿದೆ.