ಬೆಂಗಳೂರು: ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋ ದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ. ಏಕೆಂದರೆ ನಿಮ್ಮಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದರು.
ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಇಲ್ಲಿ ಹಂಚಿಕೊಳ್ಳಬೇಕು. ಕರ್ನಾಟಕ ರಾಜ್ಯ 300 ಕಿ.ಮೀ ಹೆಚ್ಚು ಕರಾವಳಿ ಪ್ರದೇಶ ಹೊಂದಿದೆ. ಈ ಮೂಲಕ ಸಾಗರೋತ್ತರ ಉದ್ದಿಮೆಯ ಅಭಿವೃದ್ಧಿಗೆ ನಿಮ್ಮ ಸಲಹೆ ನೀಡಿ ಎಂದರು.
ನಿಮಗೆ ಮೃದುವಾದ ಚಪಾತಿ ಬೇಕೇ? ಈ ಟಿಪ್ಸ್ ಫಾಲೋ ಮಾಡಿ – ಬೆಣ್ಣೆಯಂತ ಚಪಾತಿ ರೆಡಿ.!
ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದು ಹೇಳಿದರು.