ಬೆಂಗಳೂರು: ಸರ್ಕಾರದ ಶಕ್ತಿ ಯೋಜನೆಗೆ ಮಹಿಳಾ ಮಣಿಗಳು ಬಹುಪರಾಕ್ ಎಂದಿದ್ದು, ಭರ್ಜರಿಯಾಗಿ ಯಶಸ್ವಿಯಾಗಿದೆ. ಶಕ್ತಿ ಯೋಜನೆ ಈಗ ಸಾರಿಗೆ ಇಲಾಖೆಗೆ ಕೈಸುಡುತ್ತಿದ್ದು ಮೀಸಲಿಟ್ಟ ದುಡ್ಡು ಸಿಕ್ಕಾಪಟ್ಟೆ ಹೈಸ್ಪೀಡ್ನಲ್ಲಿ ಖರ್ಚಾಗುತ್ತಿದೆ.
ಕಾಂಗ್ರೆಸ್ನ ಗ್ಯಾರಂಟಿಗಳಲ್ಲಿ (Congress Guarantee) ಒಂದಾದ ಶಕ್ತಿ ಯೋಜನೆ ಜಾರಿಯಾಗಿ ಇಂದಿಗೆ ಈಗಾಗಲೇ ಐದು ತಿಂಗಳು ಕಳೆದಿವೆ. ಜೂನ್ 11ರಿಂದ ಈ ಯೋಜನೆ ಜಾರಿಯಾಗಿದ್ದು, ಸುಮಾರು 90 ಕೋಟಿಗೂ ಹೆಚ್ಚು ನಾರಿಯರು ಉಚಿತವಾಗಿ ರಾಜ್ಯದಲ್ಲಿ ಪ್ರಯಾಣಿಸಿದ್ದಾರೆ.
HDK Tweet: ಹೆಚ್ಡಿಕೆ ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಮಾಜಿ ಸಿಎಂ ಹೇಳಿದ್ದೇನು?!
ಸರ್ಕಾರದ ಅಂದಾಜು ಎಷ್ಟಿತ್ತು?
1 ತಿಂಗಳಿಗೆ ಸರ್ಕಾರದ 311 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಿತ್ತು. ಆದರೆ 5 ತಿಂಗಳಿಗೆ (ನವೆಂಬರ್ 12ರವರೆಗೆ) 2,246 ಕೋಟಿ ರೂ. ಖರ್ಚಾಗಿದೆ.
ಉಳಿದ 4 ತಿಂಗಳಿಗೆ ಸರ್ಕಾರದ ಈ ಹಿಂದೆ ನಿಗದಿ ಮಾಡಿದ ಲೆಕ್ಕಾಚಾರದಂತೆ 1,244 ಕೋಟಿ ರೂ. ಹಣ ಬೇಕಾಗುತ್ತದೆ. ಈ ಲೆಕ್ಕ ಪರಿಗಣಿಸಿದರೆ ಒಟ್ಟು 690 ಕೋಟಿ ರೂ. ಹಣ ಕೊರತೆಯಾಗುವ ಸಾಧ್ಯತೆಯಿದೆ. ಪ್ರತಿನಿತ್ಯ 40 ಲಕ್ಷದಿಂದ 60 ಲಕ್ಷ ಮಹಿಳೆಯರು ಉಚಿತವಾಗಿ ಸಂಚರಿಸುತ್ತಿದ್ದಾರೆ. ಈ ಹಣಕಾಸು ವರ್ಷ ಮುಗಿಯಲು ಇನ್ನೂ ಐದು ತಿಂಗಳು ಇರುವುದರಿಂದ ಶಕ್ತಿ ಯೋಜನೆಗೆ ಎಷ್ಟು ಖರ್ಚಾಗಬಹುದು ಎಂಬ ಕುತೂಹಲ ಈಗ ಹೆಚ್ಚಾಗಿದೆ