ಟೀಂ ಇಂಡಿಯಾದ ಅತ್ಯಂತ ಅನುಭವಿ ಬೌಲರ್ಗಳಲ್ಲಿ ಒಬ್ಬರಾಗಿರುವ ಆರ್ ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ ಅಶ್ವಿನ್ ನಿವೃತ್ತಿ ನಿರ್ಧಾರ ಪ್ರಕಟಿಸಿದರು. 5 ಪಂದ್ಯಗಳ ಸರಣಿಗೆ ಅಶ್ವಿನ್ ಅಡಿಲೇಡ್ನಲ್ಲಿ ಕೊನೆಯ ಪಂದ್ಯ ಆಡಿದ್ದರು . ಮೂರನೇ ಟೆಸ್ಟ್ ಪಂದ್ಯಕ್ಕೆ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿತ್ತು.
38 ವರ್ಷದ ಸ್ಪಿನ್ ಮಾಂತ್ರಿಕ ವಿಕೆಟ್ ಉರಳಿಸುವುದರಲ್ಲಿ ಎರಡನೇ ಲೀಡಿಂಗ್ ಬೌಲ್ರ್ ಆಗಿದ್ದರು. ನವೆಂಬರ್ 6 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದೆಹಲಿಯಲ್ಲಿ ನಡೆದ ಟೆಸ್ಟ್ ಮ್ಯಾಚ್ ಮೂಲಕ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ ಅಂಗಳಕ್ಕೆ ಪದಾರ್ಪಣೆ ಮಾಡಿದ್ದರು.ಒಟ್ಟು 106 ಟೆಸ್ಟ್ ಮ್ಯಾಚ್ಗಳನ್ನು ಆಡಿರುವ ಅಶ್ವಿನ್ ಒಟ್ಟು 537 ವಿಕೆಟ್ಗಳನ್ನು ಕಬಳಿಸಿದ್ದರು. ಐದು ದಿನದ ಟೆಸ್ಟ್ ಮಾದರಿಯ ಕ್ರಿಕೆಟ್ನಲ್ಲಿ ಕುಂಬ್ಳೆ ಈ ಹಿಂದೆ 619 ವಿಕೆಟ್ಗಳನ್ನು ಉರುಳಿಸಿ ಸಾಧನೆ ಮಾಡಿದ್ದರು.
ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್
ಅಶ್ವಿನ್ ಒಟ್ಟು 41ವಿಶ್ವ ಚಾಂಪಿಯನ್ಶಿಪ್ ಮ್ಯಾಚ್ಗಳನ್ನು ಆಡಿದ್ದು 195 ವಿಕೆಟ್ಗಳನ್ನು ಪಡೆದಿದ್ದಾರೆ. ವಿಶ್ವ ಚಾಂಪಿಯನ್ಶಿಪ್ನಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಆಟಗಾರರಾಗಿ ಅಶ್ವಿನ್ ದಾಖಲೆ ಬರೆದಿದ್ದಾರೆ. ಟೆಸ್ಟ್ ಕ್ರಿಕಟ್ ಆಚೆ 116 ಏಕ ದಿನ ಪಂದ್ಯಗಳನ್ನು ಅಶ್ವಿನ್ ಆಡಿದ್ದಾರೆ ಹಾಗೂ 65 ಟಿ20 ಪಂದ್ಯಗಳನ್ನು ಆಡಿದ್ದು ತಲಾ 156 ಮತ್ತು 72 ವಿಕೆಟ್ಗಳನ್ನು ಕಬಳಿಸಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಗವಾಸ್ಕರ್ ಬಾರ್ಡರ್ ಟ್ರೋಫಿಯ ಮೂರನೇ ಟೆಸ್ಟ್ ಡ್ರಾನಲ್ಲಿ ಕೊನೆಗೊಂಡ ಬೆನ್ನಲ್ಲೇ ಅಶ್ವಿನ್ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.