ತುಮಕೂರು:- ನೀರಿಗೆ ಸೋಡಿಯಂ ಮೆಟಲ್ ಎಸೆದು ಬ್ಲಾಸ್ಟ್ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್ ಅವರನ್ನು ಮಧುಗಿರಿ ಕೋರ್ಟ್ ಮೂರು ದಿನ ಪೊಲೀಸ್ ವಶಕ್ಕೆ ನೀಡಿ ಶುಕ್ರವಾರ ಆದೇಶಿಸಿದೆ.
ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ಯಾ!? ಹಾಗಿದ್ರೆ ಈ ಸುದ್ದಿ ಮೊದಲು ನೋಡಿ! ನಾಳೆ ಲಾಸ್ಟ್ ಡೇಟ್!
ಪ್ರಕರಣ ಸಂಬಂಧ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನೂ ಘಟನೆ ಸಂಬಂಧ ಮಿಡಿಗೇಶಿ ಪೊಲೀಸರು, ಡ್ರೊಣ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ ಮೂವರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ. ಪೊಲೀಸರು ಪ್ರತಾಪ್ನನ್ನ ಕರೆತಂದು ಸ್ಫೋಟ ನಡೆಸಿದ್ದ ಸ್ಥಳ ಮಹಜರು ನಡೆಸಿದ್ದಾರೆ.
ಘಟನೆ ಹಿನ್ನೆಲೆ:
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಐ ಡಿ ಹಳ್ಳಿ ಹೋಬಳಿಯ ಜನಕಲೋಟಿ ಬಳಿಯಿರುವ ಫಾರ್ಮ್ಹೌಸ್ನಲ್ಲಿರುವ ಕೃಷಿ ಹೊಂಡದ ನೀರಿನಲ್ಲಿ ಡ್ರೋನ್ ಪ್ರತಾಪ್ ಸೋಡಿಯಂ ಮೆಟಲ್ ಬಳಸಿ ಸ್ಫೋಟಿಸಿದ್ದರು. ನಂತರ ಈ ಸ್ಫೋಟದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಬಗ್ಗೆ ಪರಿಸರ ಪ್ರೇಮಿಗಳು, ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.