ಧಾರವಾಡ: ಧಾರವಾಡ ತಾಲೂಕಿನ ತಡಸಿನಕೊಪ್ಪ ಗ್ರಾಮದಲ್ಲಿ ಇಂದು 14 ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ ಶ್ರೀ ಅಯ್ಯಪ್ಪ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಹೊರವಲಯದ ಶ್ರೀ ಅಯ್ಯಪ್ಪ ಸನ್ನಿಧಾನದಿಂದ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಅಯ್ಯಪ್ಪ ಸ್ವಾಮಿ ಮೂರ್ತಿ ಮೆರವಣಿಗೆ ನಡೆಸಲಾಯಿತು. ಇನ್ನೂ ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕುಂಬ ಹೊತ್ತು ಸಾಗಿದ್ದು,
ಮೂರ್ತಿ ಮೆರವಣಿಗೆಯ ಮೆರುಗು ಹೆಚ್ಚಿಸಿತ್ತು. ಮಹಿಳೆಯರೊಂದಿಗೆ ಚಿಕ್ಕ ಚಿಕ್ಕ ಹೆಣ್ಣು ಮಕ್ಕಳು ಭಕ್ತಿ ಭಾವದಿಂದ ಕುಂಬ ಹೊತ್ತು ಸಾಗುತ್ತಿದ್ದು, ಅವರಿಗೆ ಹಿರಿಯ ಮಹಿಳೆಯರು ಮಾರ್ಗದರ್ಶ ಮಾಡುತ್ತಿರುವ ದೃಶ್ಯ ಕಂಡು ಬಂದಿತ್ತು. ಜೊತೆಗೆ ಕುಂಬ ಮುಂದೆ ಅಯ್ಯಪ್ಪ ಮಾಲಾಧಾರಿಗಳು ಶ್ರೀ ಅಯ್ಯಪ್ಪನ ನಾಮ ಜಪ ಮಾಡುತ್ತಾ ಸಾಗಿದ್ದು,
ತಡಸಿನಕೊಪ್ಪದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರು ಸ್ವಾಮಿ ನಾಗೇಂದ್ರ ಸ್ವಾಮಿ ನೇತೃತ್ವದಲ್ಲಿ ಮೆರವಣಿಗೆ ಸಾಗಿತ್ತು. ಕೊನೆಯಲ್ಲಿ ಟ್ಯಾಕ್ಟರನಲ್ಲಿ ಶ್ರೀ ಅಯ್ಯಪ್ಪ ಮೂರ್ತಿ ತರಲಾಗಿದ್ದು, ಅದ್ದೂರಿಯಾಗಿ ಗ್ತಾಮದಲ್ಲಿ ಅಯ್ಯಪ್ಪ ಸ್ವಾಮಿಯ ವಿಶೇಷ ಪೂಜೆ ಹಾಗೂ ಮೆರವಣಿಗೆ ನಡೆಯಿತು. ಗ್ರಾಮದ ಹಿರಿಯರು ಸೇರಿದಂತೆ ಮಹಿಳೆಯರು ಮಕ್ಕಳು ಪೂಜೆ ಮೆರವಣಿಗೆಯಲ್ಲಿ ಭಾಗವಹಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥನೆ ಮಾಡಿಕೊಂಡರು.