ಇಂದು ದೆಹಲಿಯಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 279 ರನ್ಗಳಿಗೆ ಸರ್ವಪತನ ಕಂಡಿತು.
ಮೊದಲಿಗೆ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. 49.3 ಓವರ್ಗಳಲ್ಲಿ ಶ್ರೀಲಂಕಾ 279 ರನ್ ಗಳಿಸಿತು.
ಬಾಂಗ್ಲಾದೇಶದ ಬೌಲರ್ಗಳು ಆರಂಭದಲ್ಲೇ ಎರಡು ಪ್ರಮುಖ ವಿಕೆಟ್ ಕಬಳಿಸಿ ಆತ್ಮವಿಶ್ವಾಸದಲ್ಲಿ ಆಡುತ್ತಿದ್ದಾರೆ.
ದೆಹಲಿಯ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ.
ಈ ಪಂದ್ಯವು ಬಾಂಗ್ಲಾಗಿಂತ ಶ್ರೀಲಂಕಾಕ್ಕೆ ಮುಖ್ಯವಾಗಿದೆ. ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಲಂಕಾ ತಂಡಕ್ಕೆ ಇನ್ನೆರಡು ಪಂದ್ಯಗಳು ಬಾಕಿಯಿವೆ. ಅವೆರೆಡರಲ್ಲೂ ಜಯ ಸಾಧಿಸಿದರೆ ನಾಲ್ಕರ ಘಟ್ಟಕ್ಕೆ ಪ್ರವೇಶಿಸುವ ಅಣ್ಣ ಅವಕಾಶ ಅದಕ್ಕಿದೆ. ಅದಾಗದಿದ್ದರೂ ಅಂತಿಮ ಏಳು ತಂಡಗಳಲ್ಲಿ ಸ್ಥಾನ ಉಳಿಸಿಕೊಂಡರೆ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ನೇರ ಅರ್ಹತೆ ಗಿಟ್ಟಿಸಬಹುದು ಎಂಬ ಲೆಕ್ಕಾಚಾರದಲ್ಲಿ ಕುಸಾಲ ಮೆಂಡಿಸ್ ಬಳಗ ಇದೆ.