ದೊಡ್ಡಬಳ್ಳಾಪುರ ನಗರದ ತೇರಿನಬೀದಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿತು. ಗುರುವಾರ ಮಧ್ಯಾಹ್ನ 2:10ಕ್ಕೆ ಸರಿಯಾಗಿ ಸಲ್ಲುವ ಶುಭ ಅಭಿಜನ್ ಮುಹೂರ್ತದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ಐತಿಹಾಸಿಕ ಮೈಲಾರ ಕಾರ್ಣಿಕ: ಕರ್ನಾಟಕ ಜನತೆಗೆ ಸಿಕ್ತು ಗುಡ್ ನ್ಯೂಸ್! ಏನಿದು ಭವಿಷ್ಯವಾಣಿ?
ಪ್ರತಿ ವರ್ಷದಂತೆ ರಥ ಮತ್ತು ದೇವಸ್ಥಾನದ ಸುತ್ತ ಗರುಡವೂ ಪ್ರದಕ್ಷಿಣೆ ಹಾಕಿದ್ದು ವಿಶೇಷ. ಭಕ್ತರು ರಥಕ್ಕೆ ಬಾಳೆ ಹಣ್ಣು-ಜಾವನ ಸಮರ್ಪಿಸಿ ಇಷ್ಟಾರ್ಥ ಸಿದ್ಧಿಯನ್ನು ಕೋರಿಕೊಂಡರು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ, ತೀರ್ಥ ಪ್ರಸಾದಗಳನ್ನು ಸ್ವೀಕರಿಸಿ ಸ್ವಾಮಿಯ ಕೃಪಾಕಟಾಕ್ಷಕ್ಕೆ ಪಾತ್ರರಾದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ವೇಳೆ ಶಾಸಕ ಧೀರಜ್ ಮುನಿರಾಜ್, ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ನಗರಸಭಾ ಸದಸ್ಯರು ಸೇರಿದಂತೆ ಇತರರು ಉಪಸ್ಥಿತರಿದ್ದರು.