ಶ್ರೀನಿವಾಸಪುರ : ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಕೆರೆ ಕ್ರಾಸ್ನಲ್ಲಿ ನಡೆದಿದೆ. ಕೇತಗಾನಹಳ್ಳಿ ಗ್ರಾಮದ ನಿವಾಸಿಗಳಾದ ಪದ್ಮಮ್ಮ (48), ರಘು (26) ಮೃತ ದುರ್ದೈವಿಗಳು.
ನವರಾತ್ರಿಯ 7ನೇ ದಿನ “ದೇವಿ ಕಾಲರಾತ್ರಿ” ಪೂಜೆ ಮಾಡಿ ಬದುಕಿನಲ್ಲಿ ಪೂರ್ಣಪ್ರಮಾಣದ ಅಭಿವೃದ್ಧಿ ಪಡೆಯಿರಿ.!
ಶ್ರೀನಿವಾಸಪುರ ಪಟ್ಟಣದಿಂದ ಸ್ವಗ್ರಾಮ ಕೇತಗಾನಹಳ್ಳಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.