ಇಂದು ಪುಲಕೇಶಿನಗರದ ವಾರ್ಡ್ ಗಳಿಗೆ ಶಾಸಕ ಆರ್. ಅಖಂಡ ಶ್ರೀನಿವಾಸ್ ಮೂರ್ತಿ ಅವರು ಭೇಟಿ ನೀಡಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರದಲ್ಲಿ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ ಮಾತನಾಡಿದ ಅವರು ನಿಮ್ಮ ಸಮಸ್ಯೆ ಏನೇ ಇರಲಿ ಬಗೆ ಹರಿಸುವ ಜವಾಬ್ದಾರಿ ನಮ್ಮದು. ನೀವು ನಿಸ್ಸಂಕೋಚವಾಗಿ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಿ. ಜನರ ಸೇವೆಗೆ ಸದಾ ಬದ್ಧರಾಗಿದ್ದೇವೆ. ಕ್ಷೇತ್ರದ ಜನರ ಸಮಸ್ಯೆ ನಮ್ಮ ಸಮಸ್ಯೆ ಎಂದರು, ಈ ವೇಳೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ತಂದು ತ್ವರಿತವಾಗಿ ಪರಿಹರಿಸುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.
