ಬೆಂಗಳೂರು: ನಾಳೆಯಿಂದ 2024ರ SSLC ಪರೀಕ್ಷೆ-2 ಆರಂಭವಾಗಲಿದೆ. ಪರೀಕ್ಷೆ-2 ಗೆ 2.23 ಲಕ್ಷ ವಿದ್ಯಾರ್ಥಿಗಳ ನೊಂದಣಿ ಮಾಡಕೊಂಡಿದ್ದು, ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2.23 ಲಕ್ಷ ವಿದ್ಯಾರ್ಥಿಗಳಿಗೆ ನಡೆಲಿರುವ ಪರೀಕ್ಷೆಯಾಗಿದೆ. 2024ರ ಎಸ್ಎಸ್ಎಲ್ಸಿ ಪರೀಕ್ಷೆ-2 ಜೂನ್ 22ರವರೆಗೆ ನಡೆಯಲಿದೆ.
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,44,160 ಬಾಲಕರು ಮತ್ತು 79,148 ಬಾಲಕಿಯರಿದ್ದಾರೆ. ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ.
Benefits of Turmeric Milk: ಹಾಲಿನ ಜೊತೆಗೆ ಅರಿಶಿನ ಬೆರೆಸಿ ಕುಡಿದ್ರೆ ಈ ಕಾಯಿಲೆಗಳೆಲ್ಲಾ ಮಾಯ!
ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.