ಬೆಂಗಳೂರು: SSLC ವಿದ್ಯಾರ್ಥಿಗಳ ಟರ್ನಿಂಗ್ ಲೈಫ್ ಅಂತಾರೆ. SSLC ನಲ್ಲಿ ಚನ್ನಾಗಿ ಅಂಕ ಗಳಿಸಬೇಕು ಅಂತ ವಿದ್ಯಾರ್ಥಿಗಳು ಶ್ರಮದಿಂದ ಓದುತ್ತಾರೆ .. ಆದ್ರೆ ಕೆಲವರಿಗೆ ಅದು ಆಗುವುದಿಲ್ಲ. ಅಂತವರಿಗೆ ಶಿಕ್ಷಣ ಇಲಾಖೆಯಿಂದ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡ್ತಿದ್ದ.. ಇದೀಗ ಆ ಗ್ರೇಸ್ ಮಾರ್ಕ್ಸ್ ಗೂ ಸರ್ಕಾರ ಕೊಡಲಿ ಹಾಕಿದೆ.. ಅದ್ಯಾಕೆ ಅಂತೀರಾ ಈ ಸ್ಟೋರಿ ನೋಡಿ. ಎಸ್ಎಸ್ಎಲ್ ಸಿ ಗ್ರೇಸ್ ಮಾರ್ಕ್ಸ್ ನೀಡಿದ್ದಕ್ಕೆ ಸಿಎಂ ಗರಂ ಆಗಿದ್ದಾರೆ. ಇಂದು ವಿಧಾನಸೌದದಲ್ಲಿ ಈ ಬಗ್ಗೆ ಚರ್ಚೆ ಆಗಿದೆ.
ಸಿಎಂ ಸಭೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಸಲ ಗ್ರೇಸ್ ಮಾರ್ಕ್ಸ್ ಹೆಚ್ಚಿಸಿದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದಾರೆ.ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಗ್ಗೆ ಚರ್ಚೆ ಆಗಿದೆ.ಶಿಕ್ಷಣ ಇಲಾಖೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರಲ್ಲಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ಕೊಡಲಾಗಿತ್ತು. ಈ ಮೂಲಕ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಇದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನಿರ್ಧಾರವನ್ನು ಹಿಂಪಡೆದಿದೆ.
![Demo](https://ainlivenews.com/wp-content/uploads/2023/12/spoorthi-1.jpg)
ವಿದ್ಯಾರ್ಥಿಗಳಿಗೆ ಈ ಬಾರಿ 20 ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು.. ಯಾಕೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.. ಈ ವೇಳೆ ಅಧಿಕಾರಿಗಳು ಕೊಟ್ಟ ಉತ್ತರದಿಂದ ಸಿಎಂ ಸಿದ್ದರಾಮಯ್ಯ ಆಕ್ರೋಶಗೊಂಡಿದ್ದಾರೆ.. ಗ್ರೇಸ್ ಮಾರ್ಕ್ಸ್ ನೀಡಲು ನಿಮಗೆ ಯಾರು ಹೇಳಿದ್ದು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ..ಅರ್ಹತೆ ಆಧಾರದ ಮೇಲೆ ವಿದ್ಯಾರ್ಥಿಗಳು ಪ್ರಗತಿ ಸಾಧನೆ ಮಾಡಬೇಕಾಗುತ್ತದೆ.. ಹೀಗೆ ಗ್ರೇಸ್ ಮಾರ್ಕ್ಸ್ ನೀಡಿದರೆ ವಿದ್ಯಾರ್ಥಿಗಳ ಸ್ಪರ್ಧಾ ಸಾಮರ್ಥ್ಯ ಕಡಿಮೆಯಾಗುತ್ತದೆ ಎಂದು ಸಿಎಂ ಹೇಳಿದರು..
ಇನ್ನು ಸಭೆಯ ನಂತರ ಸಮಜಾಯಿಷಿ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈಗ ಕೊಟ್ಟಿರುವ ಗ್ರೇಸ್ ಮಾರ್ಕ್ಸ್ನಲ್ಲಿ ಯಾವುದೇ ಬದಲಾವಣೆ ಇಲ್ಲ. ಆದ್ರೆ ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ..ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆಗೆ ಕನಿಷ್ಠ ಅಂಕವನ್ನು 35ರಿಂದ 25ಕ್ಕೆ ಶಿಕ್ಷಣ ಇಲಾಖೆ ಇಳಿಸಿತ್ತು. ಆದಾಗ್ಯೂ ಫಲಿತಾಂಶದ ಪ್ರಮಾಣ ಇಳಿಕೆಯಾಗಿರುವುದು ಕಳವಳಕ್ಕೆ ಕಾರಣವಾಗಿದೆ. ಈ ಬಾರಿ 1.70 ಲಕ್ಷ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿತ್ತು.
ಒಂದು ವೇಳೆ ಗ್ರೇಸ್ ಮಾರ್ಕ್ ನೀಡದಿದ್ದರೆ ಇಷ್ಟೂ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡು ಫಲಿತಾಂಶ ಪ್ರಮಾಣ ಇನ್ನಷ್ಟು ಕುಸಿಯುತ್ತಿತ್ತು ಎನ್ನಲಾಗಿದೆ. ಇನ್ನು ಸರ್ಕಾರ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ಧು ಮಾಡಲು ತಿಳಿಸಿದರು. ಒಟ್ಟಾರೆ ಹಾಗೋ ಹೀಗೆ ಗ್ರೇಸ್ ಮಾರ್ಕ್ಸ್ ಯಿಂದ ಪಾಸ್ ಆಗ್ತಿದ್ದ ವಿದ್ಯಾರ್ಥಿಗಳಿಗೆ ಸರ್ಕಾರ ಶಾಕ್ ಕೊಟ್ಟಿದೆ. ಮುಂದಿನ ದಿನಗಳಲ್ಲಿ ಪರೀಕ್ಷೆ ಮತ್ತಷ್ಟು ಸ್ಟ್ರಿಕ್ಟ್ ಆಗುವುದರಲ್ಲಿ ಸಂಶಯವೇ ಇಲ್ಲ..
![](https://ainlivenews.com/wp-content/uploads/2024/01/Ad-Banner-copy-scaled.jpg)