ಮಡಿಕೇರಿ:- SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಜರುಗಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಘಟನೆ ಜರುಗಿದೆ.
King Kohli: ಐಪಿಎಲ್ನಲ್ಲಿ ಗನ್ಶೂಟ್ ಕದನ..ಕದನದೊಳ್ ಕೊಹ್ಲಿ ಕೆಣಕಿ ಉಳಿದವರುಂಟೇ!
ಮೇ 09ರಂದು ಆರೋಪಿ ಬಾಲಕಿಯ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು. ಸದ್ಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಅಡಗಿದ್ದ ಆರೋಪಿ ಪ್ರಕಾಶ್ನನ್ನು ಸೋಮವಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ.
ಒಂದು ಕಡೆ ಮೀನಾ ಮೇ.09ರಂದು ಎಸ್ಎಸ್ಎಲ್ಸಿ ಪಾಸ್ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರಣೆ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.