ತುಮಕೂರು: ಸಾಕಷ್ಟು ಕುತೂಹಲ ಮೂಡಿಸಿದ್ದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಜಿಲ್ಲೆಯ ಶಿರಾ ಪಟ್ಟಣದ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆಯುವ ಮೂಲಕ ಅತ್ಯುನ್ನತ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹರ್ಷಿತಾ ಡಿ ಎಂ ಕರ್ನಾಟಕಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಶಿರಾ ಪಟ್ಟಣದ ಶ್ರೀವಾಸವಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಹರ್ಷಿತಾ ಡಿಎಂ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ!
ತಂದೆ ಮಂಜುನಾಥ್ ಹಾಗೂ ತಾಯಿ ಮಂಜುಳಾ ತಮ್ಮ ಪುತ್ರಿಯ ಸಾಧನೆಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಸೇರುವ ಶಿರಾ ಪಟ್ಟಣದ ಶ್ರೀ ವಾಸವಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಹರ್ಷಿತಾ ಸಾಧನೆಗೆ ಶಾಲಾಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.