ಚೆನ್ನೈ: ಹೊಸೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಸ್ಟಾಲಿನ್ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ಪ್ರತಿ ವರ್ಷ 3 ಕೋಟಿ ಪ್ರಯಾಣಿಕರ ಸಂಚಾರ ಸಾಮರ್ಥ್ಯವನ್ನು ಹೊಂದಿರುವ ವಿಮಾನ ನಿಲ್ದಾಣ ಇದಾಗಲಿದ್ದು, 2,000 ಎಕರೆಗಳಷ್ಟು ವಿಸ್ತಾರವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಹೊಸೂರು ಇತ್ತೀಚಿನ ವರ್ಷಗಳಲ್ಲಿ ಹೂಡಿಕೆದಾರರನ್ನು ಆಕರ್ಷಿಸುತ್ತಿದೆ. ಈ ಭಾಗದಲ್ಲಿ ಆಧುನಿಕ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಮೂಲಕ ಪ್ರಮುಖ ಆರ್ಥಿಕ ಕೇಂದ್ರವನ್ನಾಗಿ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ. ಹೊಸೂರು, ಕೃಷ್ಣಗಿರಿ ಮತ್ತು ಧರ್ಮಪುರಿ ಅಭಿವೃದ್ಧಿಗೆ ಹೊಸೂರಿನಲ್ಲಿ ವಿಮಾನ ನಿಲ್ದಾಣ ಸ್ಥಾಪಿಸುವುದು ಅಗತ್ಯವಾಗಿದೆ ಅವರು ತಿಳಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಜಾಗದ ಹುಡುಕಾಟ ಪ್ರಾರಂಭಿಸಿದ ನಂತರ ತಮಿಳುನಾಡಿನಿಂದ ಈ ನಿರ್ಧಾರ ಹೊರ ಬಿದ್ದಿದೆ. ಬೆಂಗಳೂರಿನ ತುಮಕೂರು ರಸ್ತೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವ ಸಾಧ್ಯತೆಯಿದೆ. ಹೊಸೂರಿನಲ್ಲಿ ಥಾಲಿ ವಿಮಾನ ನಿಲ್ದಾಣವನ್ನು ಹೊಂದಿರುವ ಮತ್ತು ನಿರ್ವಹಿಸುವ ತನೇಜಾ ಏರೋಸ್ಪೇಸ್ ಮತ್ತು ಏವಿಯೇಷನ್ ಲಿಮಿಟೆಡ್, ಕೇಂದ್ರ ಸರ್ಕಾರ ಮತ್ತು ಬೆಂಗಳೂರು ಇಂಟರ್ನ್ಯಾಶನಲ್ ಏರ್ಪೋಟ್ ಲಿಮಿಟೆಡ್ ನಡುವಿನ ರಿಯಾಯಿತಿ ಒಪ್ಪಂದದಿಂದಾಗಿ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಾಧ್ಯವಾಗಿಲ್ಲ.
Orange peel tea: ಕಿತ್ತಳೆ ಸಿಪ್ಪೆಯ ಚಹಾ ಮಾಡುವ ವಿಧಾನ ಮತ್ತು ಅದರ ಪ್ರಯೋಜನಗಳು ಇಲ್ಲಿದೆ..!
ಬೆಂಗಳೂರು ವಿಮಾನ ನಿಲ್ದಾಣದಿಂದ 150 ಕಿಲೋಮೀಟರ್ ವೈಮಾನಿಕ ಅಂತರದಲ್ಲಿ 25 ವರ್ಷಗಳವರೆಗೆ (2033 ರವರೆಗೆ) ಯಾವುದೇ ಹೊಸ ಅಥವಾ ಅಸ್ತಿತ್ವದಲ್ಲಿರುವ ದೇಶೀಯ ವಿಮಾನ ನಿಲ್ದಾಣಗಳನ್ನು ತೆರೆಯುವುದನ್ನು ಈ ಒಪ್ಪಂದವು ನಿಷೇಧಿಸುತ್ತದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು 2008ರ ಮೇ 24 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ವಿಮಾನ ನಿಲ್ದಾಣ ನಿರ್ಮಾಣದ ನಿರ್ಧಾರದ ಘೋಷಣೆ ಬಳಿಕ, ಪ್ರತಿಕ್ರಿಯಿಸಿರುವ ತಮಿಳುನಾಡು ಕೈಗಾರಿಕಾ ಸಚಿವ ಟಿಆರ್ಬಿ ರಾಜಾ ಅವರು, ಬೆಂಗಳೂರು ಮತ್ತು ಚೆನ್ನೈಗೆ ಸಮೀಪದ ಹೊಸೂರು ಅಭಿವೃದ್ಧಿ ಹೊಂದುತ್ತಿದೆ. ಬೆಳೆಯುತ್ತಿರುವ ಉದ್ಯಮಗಳಿಂದಾಗಿ ಆರ್ಥಿಕತೆ ಉತ್ತೇಜನಕ್ಕೆ ವಿಮಾನ ನಿಲ್ದಾಣ ನೆರವಾಗಲಿದೆ ಎಂದಿದ್ದಾರೆ.
ಹೊಸೂರಿನಲ್ಲಿ ಹೊಸ ವಿಮಾನ ನಿಲ್ದಾಣದ ಘೋಷಣೆ ಈ ಪ್ರದೇಶಕ್ಕೆ ಒಂದು ಹೆಗ್ಗುರುತಾಗಲಿದೆ. ಈ ಯೋಜನೆಯು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಹೊಸೂರು ಮಾತ್ರವಲ್ಲದೆ ನೆರೆಯ ಜಿಲ್ಲೆಗಳಾದ ಧರ್ಮಪುರಿ ಮತ್ತು ಸೇಲಂಗೂ ಪ್ರಯೋಜನವಾಗಲಿದೆ. ಬೆಂಗಳೂರಿನ ವಿವಿಧ ಭಾಗಗಳಿಗೆ ಗಮನಾರ್ಹವಾದ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)