ಲಕ್ನೋ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ 2025ರ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ 15 ಭಕ್ತರು ಜೀವ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಇದರ ಬೆನ್ನಲ್ಲೇ ಸಂಗಮದ ಎಲ್ಲಾ ಘಾಟ್ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಜನರಲ್ಲಿ ಮನವಿ ಮಾಡಿದ್ದಾರೆ.
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಯೋಗಿ ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ ತ್ರಿವೇಣಿ ಸಂಗಮಕ್ಕೆ ಹೋಗಲು ಪ್ರಯತ್ನ ಮಾಡಬೇಡಿ ಎಂದು ವಿನಂತಿ ಮಾಡಿದ್ದಾರೆ.
ಎಷ್ಟೇ ನೀರು ಕುಡಿದರೂ ದಾಹ ನೀಗುತ್ತಿಲ್ಲವೆ..? ಬಾಯಾರಿಕೆ ಜಾಸ್ತಿ ಆಗೋಕೆ ಇದೇ ಕಾರಣ ಇರಬಹುದು
ನಾನು ಸಾಧು ಸಂತರ ಜೊತೆಗೆ ಮಾತನಾಡಿದ್ದೇವೆ. ಮೊದಲು ಭಕ್ತಾಧಿಗಳು ಪುಣ್ಯಸ್ನಾನ ಮಾಡಲಿ. ಆಮೇಲೆ ನಾವು ಸ್ನಾನ ಮಾಡುವುದಾಗಿ ಸಾಧು ಸಂತರು, ಅಖಾಡಗಳ ಮುಖ್ಯಸ್ಥರು ಹೇಳಿದ್ದಾರೆ. ಆರೋಗ್ಯ ಸಮಸ್ಯೆ ಇರುವವರು ದೂರು ನಡೆಯಬೇಡಿ.
ಯಾವುದೇ ಘಾಟ್ನಲ್ಲಿ ಸ್ನಾನ ಮಾಡಿದರು ಅದು ಗಂಗಾ ನದಿಯ ನೀರು. ಮೌನಿ ಅಮವಾಸ್ಯೆ ಗಂಗಾ ಸ್ನಾನ ಪುಣ್ಯ ಪ್ರಾಪ್ತಿ ಮಾಡಲಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಜನಸ್ತೋಮ ಇರುವ ಹಿನ್ನಲೆ ಜನರು ಸಂಯಮದಿಂದ ವರ್ತಿಸಿ ಎಂದು ಮನವಿ ಮಾಡಿದರು. ಆಡಳಿತದ ಸೂಚನೆಗಳನ್ನು ಅನುಸರಿಸಿ ಮತ್ತು ಅವರೊಂದಿಗೆ ಸಹಕರಿಸಬೇಕು. ಯಾವುದೇ ವದಂತಿಗಳಿಗೆ ಗಮನ ಕೊಡಬೇಡಿ ಎಂದು ಕೇಳಿಕೊಂಡಿದ್ದಾರೆ.