ಹೈದರಾಬಾದ್ನ:- ಸಂಧ್ಯಾ ಥಿಯೇಟರ್ ಬಳಿ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ.
ಡಾ.ಎಂ. ಲೀಲಾವತಿ ಸ್ಮಾರಕ ಉದ್ಘಾಟನೆಗೆ ಕ್ಷಣಗಣನೆ: ಸಿದ್ಧತೆಯಲ್ಲಿ ಮಗ ವಿನೋದ್!
ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಪುಷ್ಪ 2: ದಿ ರೂಲ್’ ಸಿನಿಮಾ ವರ್ಲ್ಡ್ ವೈಡ್ ರಿಲೀಸ್ ಆಗಿದ್ದು, ಚಿತ್ರಪ್ರದರ್ಶನ ಆರಂಭವಾದ ಬುಧವಾರ ರಾತ್ರಿ ದುರಂತ ಸಂಭವಿಸಿದೆ.
ಪ್ರೀಮಿಯರ್ ಶೋ ವೇಳೆ ಕಾಲ್ತುಳಿತದಿಂದ 39 ವರ್ಷದ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದು, ಒಂದು ಮಗುವಿನ ಸ್ಥಿತಿ ಕೂಡ ಗಂಭೀರವಾಗಿ ಎಂದು ಹೇಳಲಾಗುತ್ತಿದೆ.
ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು.
ರಾತ್ರಿ 10:30 ರ ಸುಮಾರಿಗೆ ಥಿಯೇಟರ್ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.