ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದೆ. ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿಗೆ ಉಸಿರಾಟದ ಸಮಸ್ಯೆ ಎದುರಿಸಿದರು.
ಇನ್ನೂ ಈ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಕುಂಭಮೇಳದ ಪರಿಸ್ಥಿತಿಯ ಮೇಲೆ ಕಣ್ಣಿರಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಒಂದು ಗಂಟೆಯಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಎಷ್ಟೇ ನೀರು ಕುಡಿದರೂ ದಾಹ ನೀಗುತ್ತಿಲ್ಲವೆ..? ಬಾಯಾರಿಕೆ ಜಾಸ್ತಿ ಆಗೋಕೆ ಇದೇ ಕಾರಣ ಇರಬಹುದು
ಪ್ರಧಾನಿ ಮೋದಿಯವರು ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ಬಹಳ ಜಾಗರೂಕರಾಗಿದ್ದು, ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅದೇ ಸಮಯದಲ್ಲಿ, ಘಟನೆಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವುದಾಗಿ ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.
ಅಮಿತ್ ಶಾ ಅವರು ಮುಖ್ಯಮಂತ್ರಿಯಿಂದ ದೂರವಾಣಿ ಮೂಲಕ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಕ್ತರು ಸಂಗಮದ ಮಧ್ಯ ಭಾಗಕ್ಕೆ ತೆರಳಬೇಡಿ, ಹತ್ತಿರದ ಘಾಟ್ನಲ್ಲಿ ಸ್ನಾನಮಾಡಿ ಎಂದು ಮನವಿ ಮಾಡಿದ್ದಾರೆ. ಆಡಳಿತ ನೀಡುವ ಸೂಚನೆಗಳನ್ನು ಪಾಲಿಸಿ ಆಡಳಿತಕ್ಕೆ ಸಹಕರಿಸುವಂತೆ ಮನವಿ ಮಾಡಿದರು. ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಹೇಳಿದರು.