ನವದೆಹಲಿ: ಸಾವಿನ ಸಂಖ್ಯೆ ಮುಚ್ಚಿಡಲು ಸರ್ಕಾರ, ಶವಗಳನ್ನು ನದಿಗೆ ಎಸೆದಿದೆ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಆರೋಪಿಸಿದ್ದಾರೆ. ಕುಂಭಮೇಳ ಕಾಲ್ತುಳಿತ ದುರಂತ ಸಂಸತ್ ಅಧಿವೇಶನದ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದೆ. ಕಾಲ್ತುಳಿತದಿಂದ ಉಂಟಾದ ಸಾವುಗಳ ಬಗ್ಗೆ ಯುಪಿ ಸರ್ಕಾರ ಅಧಿಕೃತ ಅಂಕಿ ಸಂಖ್ಯೆ ನೀಡದ್ದನ್ನೇ ಅಸ್ತ್ರ ಮಾಡಿಕೊಂಡ ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ.
Tulsi Plant: ನಿಮ್ಮ ಮನೆಯಲ್ಲಿ ತುಳಸಿ ಗಿಡವನ್ನು ಯಾವ ದಿಕ್ಕಿನಲ್ಲಿ ಇಟ್ಟರೆ ಒಳಿತಾಗುತ್ತೆ? ಇಲ್ಲಿದೆ ಮಾಹಿತಿ
ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಲ್ತುಳಿತದ ಸಂದರ್ಭದಲ್ಲಿ ಸಂಭವಿಸಿದ ಸಾವುಗಳ ನಿಜವಾದ ಅಂಕಿಅಂಶಗಳನ್ನು ಸರ್ಕಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಜನವರಿ 13ರಂದು ಮಹಾ ಕುಂಭಮೇಳ ಶುರುವಾಯಿತು. ಜನವರಿ 29ರಂದು ಅಮೃತ ಸ್ನಾಹದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 30 ಜನ ಸಾವನ್ನಪ್ಪಿದ್ದಾರೆ ಎಂದು ಯುಪಿ ಸರ್ಕಾರ ಅಂಕಿ ಅಂಶ ಬಿಡುಗಡೆ ಮಾಡಿತ್ತು. ಶವಗಳನ್ನು ನದಿಗೆ ಎಸೆದಿದ್ದರಿಂದ ತ್ರಿವೇಣಿ ಸಂಗಮದಲ್ಲಿ ನೀರು ಕಲುಷಿತಗೊಂಡಿದೆ ಎಂದು ಹೇಳೀದ್ದಾರೆ. ಇದು ಆಕ್ರೋಶಕ್ಕೆ ಕಾರಣವಾಗಿದೆ.