ಟಾಲಿವುಡ್ ಚಿತ್ರರಂಗದ ಸ್ಟಾರ್ ಬ್ಯೂಟಿ, ಕೋಟ್ಯಾಂತರ ಅಭಿಮಾನಿಗಳ ಮನದರಸಿ ನಟಿ ತಮ್ಮನ್ನಾ ಭಾಟಿಯಾ ಇದೀಗ ಹೊಸ ಫೋಟೋ ಶೂಟ್ ಮೂಲಕ ಸದ್ದು ಮಾಡ್ತಿದ್ದಾರೆ.
ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಪ್ರಮುಖವಾಗಿ ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ತಮನ್ನಾ ಕೆಲ ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ.

ಕನ್ನಡದಲ್ಲಿ ನಿಖಿಲ್ ಕುಮಾರಸ್ವಾಮಿ ನಟನೆಯ `ಜಾಗ್ವಾರ್’ ಮತ್ತು ಯಶ್ ನಟನೆಯ `ಕೆಜಿಎಫ್’ ಚಿತ್ರಗಳ ಐಟಂ ಹಾಡುಗಳಿಗೆ ನೃತ್ಯ ಮಾಡಿದ್ದಾರೆ. ಈ ಮೂಲಕ ಕನ್ನಡದಲ್ಲೂ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
ತಮನ್ನಾ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೊಸ ಫೋಟೋಗಳನ್ನು ಶೇರ್ ಮಾಡಿದ್ದು ಸಾಕಷ್ಟು ಮಂದಿ ಮೆಚ್ಚುಗೆ ಸೂಚಿಸಿದ್ದಾರೆ.
ತಮನ್ನಾ ಹೊಸ ಫೋಟೋದಲ್ಲಿ ನೋಡೋಕೆ ಸಖತ್ ಕ್ಯೂಟ್ ಆಗಿ ಕಾಣ್ತಾ ಇದ್ದು ನೀವು ಯಾವಾಗಲೂ ಯಂಗ್ ಆಗಿ ಕಾಣ್ತೀರಿ ಎಂದು ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
ನಟಿ ತಮನ್ನಾ ಅವರು ಶೇರ್ ಮಾಡಿರುವ ಫೋಟೋಗಳಿಗೆ 6 ಲಕ್ಷಕ್ಕೂ ಹೆಚ್ಚು ಲೈಕ್ಸ್ ಬಂದಿವೆ. 6 ಪ್ಯಾಕ್ ನಟಿ, ಫೈರ್, ಸೂಪರ್, ನೈಸ್, ಲವ್ ಯು ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.
13 ನೇ ವಯಸ್ಸಿನಲ್ಲಿಯೇ ನಟನೆಗೆ ಎಂಟ್ರಿಕೊಟ್ಟ ತಮನ್ನಾ 2005 ರಲ್ಲಿ ತಮ್ಮ ಹದಿನೈದನೇ ವಯಸ್ಸಿನಲ್ಲಿ `ಚಾಂದ್ ಸಾ ರೋಷನ್ ಚೆಹರಾ’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಈ ಚಿತ್ರ ಯಶಸ್ವಿಯಾಗಲಿಲ್ಲ. ಅದೇ ವರ್ಷ ತೆಲುಗಿನ ಶ್ರೀ ಮತ್ತು ಮುಂದಿನ ವರ್ಷ ತಮಿಳಿನ ಕೇಡಿ ಚಿತ್ರಗಳಲ್ಲಿ ನಟಿಸಿದರು. ಈ ಚಿತ್ರಗಳ ನಟನೆಗೆ ಪ್ರಶಂಸೆ ಪಡೆದರು. ನಂತರ ತೆರೆಕಂಡ ಹ್ಯಾಪಿ ಡೇಸ್, ಕಲ್ಲೂರಿ ಚಿತ್ರಗಳು ತಮನ್ನಾಗೆ ಇನ್ನಷ್ಟು ಖ್ಯಾತಿ ನೀಡಿದವು.
