ಐಪಿಎಲ್ 2024 ರ 25 ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸುತ್ತಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಇನ್ನೂ ಈ ಪಂದ್ಯದಲ್ಲಿ ಭಾರತ ತಂಡದ ಇಬ್ಬರು ಪ್ರಮುಖ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಡುವೆ ಕುತೂಹಲಕಾರಿ ಕದನ ನಡೆಯಲಿದೆ. ಅದೇ ವೇಳೆ ನಾಯಕತ್ವದ ವಿಚಾರದಲ್ಲಿ ನಿರಂತರವಾಗಿ ಟೀಕೆ ಎದುರಿಸುತ್ತಿರುವ ಹಾರ್ದಿಕ್ ಪಾಂಡ್ಯ ಹಾಗೂ ಫಾಫ್ ಡುಪ್ಲೆಸಿಸ್ ಅವರಿಗೂ ಕಠಿಣ ಪರೀಕ್ಷೆ ಎದುರಾಗಿದೆ.
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಐಪಿಎಲ್ನಲ್ಲಿ ಇಲ್ಲಿಯವರೆಗೆ ಎರಡು ತಂಡಗಳ ನಡುವೆ 32 ಪಂದ್ಯಗಳು ನಡೆದಿವೆ, ಅದರಲ್ಲಿ ಮುಂಬೈ 18 ಪಂದ್ಯಗಳನ್ನು ಗೆದ್ದಿದ್ದರೆ ಬೆಂಗಳೂರು 14 ಪಂದ್ಯಗಳನ್ನು ಗೆದ್ದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಇದುವರೆಗೆ ನಡೆದ ಪಂದ್ಯಗಳ ಬಗ್ಗೆ ಹೇಳುವುದಾದರೆ, ಉಭಯ ತಂಡಗಳ ನಡುವೆ ಇದುವರೆಗೆ 10 ಪಂದ್ಯಗಳು ನಡೆದಿದ್ದು, ಅದರಲ್ಲಿ 7 ಪಂದ್ಯಗಳನ್ನು ಮುಂಬೈ ಇಂಡಿಯನ್ಸ್ ಮತ್ತು 3 ಪಂದ್ಯಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆದ್ದಿದೆ.