ಚಾಮರಾಜನಗರ : ಮಾ.7ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ರೈತಪರ ಬಜೆಟ್ ಮಂಡಿಸಲು ಮುಖ್ಯಮಂತ್ರಿಗಳಿಗೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ರೈತರ ಒತ್ತಾಯಿಸಿದ್ದಾರೆ. ಅಲ್ಲದೇ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
ರೈತರೇ ಗಮನಿಸಿ.. ಬೆಳೆಗಳನ್ನು ಕೀಟ ಬಾಧೆಯಿಂದ ರಕ್ಷಿಸಲು ಬಂದಿದೆ ಹೊಸ ಕೀಟನಾಶಕ!
ಈ ಬಗ್ಗೆ ಮಾತನಾಡಿರುವ ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ಯ, ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘದ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಕಬ್ಬಿನ ಬಾಕಿ ೯೫೦ ಕೋಟಿ ರೂಪಾಯಿಯನ್ನು ಸರ್ಕಾರ ರೈತರಿಗೆ ಕೊಡಲು ಕ್ರಮ ಕೈಗೊಳ್ಳಬೇಕು. ಪ್ರಸಕ್ತ ಸಾಲಿಗೆ ಪ್ರತಿ ಟನ್ ಕಬ್ಬಿಗೆ ಐದು ಸಾವಿರ ರೂಪಾಯಿ ನಿಗದಿ ಮಾಡಬೇಕು. ಕೃಷಿ ಪಂಪ್ಸೆಟ್ ವಿದ್ಯುತ್ ಗಾಗಿ ಅಕ್ರಮ ಸಕ್ರಮ ಯೋಜನೆಯನ್ನು ಮರು ಜಾರಿ ಮಾಡಬೇಕು.ಮೊಬೈಲ್ ಆನ್ಲೈನ್ ಗೇಮ್ ರಾಜ್ಯದಲ್ಲಿ ನಿಷೇಧ ಮಾಡಬೇಕು. ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ನದಿ ಮೂಲದಿಂದ ವಿಸ್ತರಿಸ ಬೇಕು. ಕಾಡು ಪ್ರಾಣಿಗಳ ಹಾವಳಿ ತಡೆಯಲು ವೈಜ್ಞಾನಿಕ ಕ್ರಮ ಕೈಗೊಳ್ಳಬೇಕು. ಎಲ್ಲಾ ಬೆಳೆಗಳಿಗೂ ವೈಜ್ಞಾನಿಕವಾಗಿ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.