ಬೆಂಗಳೂರು: ದಶಕದ ಬಳಿಕ ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಾದ ಕಲಬುರಗಿಯಲ್ಲಿ ಇಂದು ಮಂಗಳವಾರ ಸಚಿವ ಸಂಪುಟ ಸಭೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಇಂದೇ ಕಲಬುರಗಿ ತಲುಪಿದ್ದಾರೆ.
ಸಿಎಂ ಸಿದ್ದರಾಮಯ್ಯ( CM Siddaramaiah )ನೇತೃತ್ವದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆ (Discussion on welfare karnataka development)ನಡೆಸಲಾಗುವುದು.
ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಅಧಿಕಾರಿಗಳು ವಿಮಾನದ ಮೂಲಕ ಬೆಂಗಳೂರಿನಿಂದ ಕಲುಬುರಗಿಗೆ ತೆರಳಿದ್ದಾರೆ.
ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ದಶಕದ ನಂತರ ಸಚಿವ ಸಂಪುಟ ಸಭೆ ನಡೆಯಲಿದ್ದು, ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿ ಹಲವು ಮಹತ್ವದ ಘೋಷಣೆಗಳ ಪ್ರಕಟಿಸುವ ನಿರೀಕ್ಷೆ ಇದೆ.