ರಾಜ್ಯದ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದಾದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.13 ರಂದು ಸಂಪುಟ ಸಭೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಚೆ ಇದೆ.
ಹೆಚ್ಚಿನ ಅನುದಾನದ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಜಿಲ್ಲೆಯ ಜನತೆಗೆ ಹಾಗೂ ಜಿಲ್ಲೆಯ ಸರ್ವತೋಮುಖಅಭಿವೃದ್ದಿ ನಿರೀಕ್ಷೆ ದಟ್ಟವಾಗಿದೆ. ಸಿದ್ದರಾಮಯ್ಯರವರ ನೇತೃತ್ವದ ರಾಜ್ಯ ಸರ್ಕಾರದಿಂದ ಫೆಬ್ರವರಿ 13 ರಂದು ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿದ್ದು, ಬೆಟ್ಟದಲ್ಲಿ 108 ಅಡಿ ಎತ್ತರದ ಮಹದೇಶ್ವರ ಪ್ರತಿಮೆ ಇರುವ ಸುಂದರ ಪರಿಸರದಲ್ಲಿ ಸಂಪುಟ ಸಭೆ ನಡೆಯಲಿದೆ.
ಬೆಳಗಾವಿ, ಕಲಬುರಗಿ ನಂತರ ಇದೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಪರಿಪೂರ್ಣ ಸಚಿವ ಸಂಪುಟ ಸಭೆ ನಡೆಯಲಿದ್ದು, ಗಿರಿಜನರಿಗೆ ವಸತಿ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಆಗುವ ನಿರೀಕ್ಷೆ ಇದೆ. ಈ ಕುರಿತು ಚಾಮರಾಜನಗರ
ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಬೆಳಗಾವಿ, ಕಲಬುರಗಿ ನಂತರ ಇದೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಪರಿಪೂರ್ಣ ಸಚಿವ ಸಂಪುಟ ಸಭೆ ನಡೆಯಲಿದ್ದು, ಗಿರಿಜನರಿಗೆ ವಸತಿ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಆಗುವ ನಿರೀಕ್ಷೆ ಇದೆ.
ಪುರುಷರ ಫಲವತ್ತತೆ ಹೆಚ್ಚಿಸೋಕು ಸೈ! ದೇಹದ ತೂಕ ಇಳಿಸೋಕು ಸೈ ಈ ಸಿಹಿ ಕುಂಬಳಕಾಯಿ
ಜಿಲ್ಲೆಗೆ ಅಗತ್ಯವಿರುವ ಮೂಲಸೌಕರ್ಯ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಯಾರು ಮಾಡಿಕೊಳ್ಳುತ್ತಿದ್ದೇವೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲಸೌಕರ್ಯ ಸಿಗುವುದರ ಬಗ್ಗೆ ವಿಶ್ವಾಸ ಇದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ಎಂ.ಕೃಷ್ಣರವರ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಸಂಪುಟ ಸಭೆ ನಡೆಸಿದ್ದರು. ಅರಣ್ಯ, ಲೋಕೋಪಯೋಗಿ, ಸಮಾಜ ಕಲ್ಯಾಣ ಇಲಾಖೆ ಸಚಿವರ ಸಭೆ ನಡೆಸಿ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಂಡಿದ್ದರು. ಒಟ್ಟಿನಲ್ಲಿ ಗಡಿಜಿಲ್ಲೆ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ತೊಡೆದುಹಾಕಿದ್ದ ಸಿಎಂ ಸಿದ್ದರಾಮಯ್ಯ 2025 ರ ಹೊಸ ವರ್ಷದ ಪ್ರಾರಂಭದಲ್ಲಿಯೇ ಗಡಿ ಜಿಲ್ಲೆಯಲ್ಲಿ ಸಂಪುಟ ಸಭೆ ನಡೆಸಿ ವಿಶೇಷ ಪ್ಯಾಕೇಜ್, ವಿಶೇಷ ಯೋಜನೆ ಮೂಲಕ ಜಿಲ್ಲೆಯ ಚಿತ್ರಣ ಬದಲಾಯಿಸಬಹುದು ಎಂಬುದು ಎಲ್ಲರ ನಿರೀಕ್ಷೆಯಾಗಿದೆ.