ಕಲಬುರಗಿ: ರಾಜ್ಯ ಹಾಗೂ ಕೇಂದ್ರ ಸರ್ಕಾರ ರೈತರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಹೋರಾಟಗಾರ ಕುರುಬೂರು ಶಾಂತಕುಮಾರ್ ಅವರು ಉಭಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಯಾವುದೇ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ನೆರವಿಗೆ ಬಾರದೆ ರಾಜಕೀಯ ಚೆಲ್ಲಾಟ ಮಾಡುತ್ತಿದ್ದಾರೆ. ರಾಜ್ಯದ 220 ತಾಲೂಕುಗಳು ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿವೆ. ಕೃಷಿ ಸಾಲ ಪಡೆದ ರೈತರು ಬೆಳೆ ಬೆಳೆಯಲು ಹೂಡಿಕೆ ಮಾಡಿದ್ದಾರೆ. ಬೆಳೆ ನಾಶವಾಗಿದೆ ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ’ ಎಂದರು.
Vishwas Vaidya: ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಸತೀಶ್ ಜಾರಕಿಹೊಳಿ CM ಆಗುವುದು ಅಷ್ಟೇ ಸತ್ಯ: ಕಾಂಗ್ರೆಸ್ ಶಾಸಕ
ಕೈಗಾರಿಕೆ, ಉದ್ಯಮಿಗಳಿಗೆ ಸಂಕಷ್ಟದ ನೆರವು ಸಾಲ ಮನ್ನಾ ಮಾಡಿರುವ ರೀತಿ, ರೈತರ ಎಲ್ಲಾ ಬ್ಯಾಂಕು ಹಾಗೂ ಸಹಕಾರ ಸಂಘಗಳ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲೇಬೇಕು. ರೈತರ ಸಾಲ ವಸೂಲಿಗೆ ಬ್ಯಾಂಕ್ ಗಳು ನೀಡುವ ಕಿರುಕುಳ ನಿಲ್ಲಬೇಕು ಎಂದು ಒತ್ತಾಯಿಸಿದರು.