ಶಿರಾ:- ಮಾಜಿ ಸಚಿವ ಆರ್. ಅಶೋಕ ಅವರು ಪ್ರತಿಕ್ರಿಯೆ ನೀಡಿ, ಜಾತಿ ಗಣತಿಗೆ ಬಿಜೆಪಿ ವಿರೋಧ ಇಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಜಾತಿ ಗಣತಿಯನ್ನು ಬಿಜೆಪಿ ಎಂದೂ ವಿರೋಧ ಮಾಡುವುದಿಲ್ಲ. ಆದರೆ, ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದರು. ವೀರಶೈವ ಎಂದು ಜಾತಿ ಒಡೆಯುವ ಕೆಲಸ ಮಾಡಿದ್ದ ಸಿದ್ದರಾಮಯ್ಯ ಈ ಬಾರಿ ಜಾತಿ, ಜಾತಿಗಳನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.
NPCI guidelines: ಒಂದು ವರ್ಷದಿಂದ ಯಾವುದೇ ವಹಿವಾಟು ನಡೆಸದ ಯುಪಿಐ ಐಡಿ, ಯುಪಿಐ ನಂಬರ್ ಡೀ ಆ್ಯಕ್ಟಿವೇಟ್: ಕಾರಣ!
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅವರ ಸಂಪುಟದ ಸದಸ್ಯರೇ ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಈಗಾಗಲೇ ಸೋರಿಕೆಯಾಗಿದ್ದು, ಅವೈಜ್ಞಾನಿಕವಾಗಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಕೆಟ್ಟ ಸಂಪ್ರದಾಯ ಆರಂಭಿಸಿದೆ. ಸಂಪುಟ ಸಭೆಯನ್ನು ದುರುಪಯೋಗ ಮಾಡಿಕೊಂಡಿದೆ ಎಂದು ತರಾಟೆಗೆ ತೆಗೆದುಕೊಂಡರು. ಈ ಹಿಂದೆ ಲೋಕಾಯುಕ್ತ ಸಂಸ್ಥೆ ರದ್ದು ಮಾಡುವ ಮೂಲಕ ಭ್ರಷ್ಟಾಚಾರಕ್ಕೆ ತಳಪಾಯ ಹಾಕಿದ ಭ್ರಷ್ಟಾಚಾರದ ರಾಯಭಾರಿ ಸಿದ್ದರಾಮಯ್ಯ ಎಂದರು.