ಲಕ್ನೋ: ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (SBSP) ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿನಿ ರಾಜ್ಭರ್ (30) (Nandini Rajbhar) ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.
ಕೊತ್ವಾಲಿ ಖಲೀಲಾಬಾದ್ ಪ್ರದೇಶದ ಆಕೆಯ ನಿವಾಸದಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್ ನಗರದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bigg News : ಲೋಕಸಭಾ ಚುನಾವಣೆ : ಮಾರ್ಚ್ 15ರಿಂದ ಪ್ರಧಾನಿ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ
ನಂದಿನಿ ದೇಹದ ಮೇಲೆ ಅನೇಕ ಇರಿತದ ಗಾಯಗಳಿವೆ. ಸುಮಾರು 10 ದಿನಗಳ ಹಿಂದೆ ವರದಿಯಾದ ವಿವಾದದ ಕುರಿತು ಅಪರಿಚಿತ ವ್ಯಕ್ತಿಗಳು ನಂದಿನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ಐಜಿ ರಾಮ್ ಕೃಷ್ಣ ಭಾರದ್ವಾಜ್ ಹೇಳಿದ್ದಾರೆ.
ಮಾಹಿತಿ ಪಡೆದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಪ್ರಕರಣ ಸಂಬಂಧ ಸ್ಥಳೀಯರು 3-4 ಜನರನ್ನು ಹೆಸರಿಸಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಸ್ಥಳದಲ್ಲಿ ಭಾರೀ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ